ಶಾಂತಿ ಸ್ಥಾಪನೆ ಸರ್ಕಾರದ ಪ್ರಯತ್ನಕ್ಕೆ ಸಹಕಾರ

ಬೆಂಗಳೂರು: ಕಳೆದ ರಾತ್ರಿ ನಡೆದ ಗಲಭೆ ಮತ್ತು ಅದಕ್ಕೆ ಪ್ರಚೋದನೆ ನೀಡಿದ ಘಟನೆಗಳನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸರಣಿ ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ.

ಹಿಂದೂ-ಮುಸ್ಲಿಮ್ ಎರಡೂ ಸಮುದಾಯದವರು ಸಂಯಮದಿಂದ ವರ್ತಿಸಿ ಶಾಂತಿ ಕಾಪಾಡಬೇಕೆಂದು ಕೈಮುಗಿದು ಮನವಿ ಮಾಡುತ್ತಿದ್ದೇನೆ.

ಗಲಭೆಗೆ ಪ್ರಚೋದಿಸಿದ್ದ ಮತ್ತು ಹಿಂಸಾಚಾರದ ಮೂಲಕ ಪ್ರತಿಕ್ರಿಯಿಸಿದ್ದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಕಮಿಷನರ್ ಗೆ ತಿಳಿಸಿರುವುದಾಗಿ ಹೇಳಿದ್ದಾರೆ.
ಶಾಂತಿ ಸ್ಥಾಪನೆಯ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ನಮ್ಮ ಪಕ್ಷದ ಸಂಪೂರ್ಣ ಸಹಕಾರ ಇದೆ ಎಂದು ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply