ಪದವಿ ಅಂತಿಮ ಪರೀಕ್ಷೆ ನಡೆಸಲೇ ಬೇಕು: ಸುಪ್ರೀಂ ಕೋರ್ಟ್‌

ನವದೆಹಲಿ: ಕೊರೋನಾ ಹಿನ್ನೆಲೆಯಲ್ಲಿ ಅಂತಿಮ ವರ್ಷದ ಪದವಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಸುಪ್ರೀಂ ಕೋರ್ಟ್‌ನಿಂದ ಶುಕ್ರವಾರ ಮಹತ್ವದ ತೀರ್ಪು ಹೊರ ಬಿದ್ದಿದ್ದು, ಯುಜಿಸಿ ನಿರ್ದೇಶನದಂತೆ ಪರೀಕ್ಷೆ ನಡೆಯಲಿದೆ.

ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠದ ತೀರ್ಪಿನಲ್ಲಿ ಪದವಿ ಅಂತಿಮ ಪರೀಕ್ಷೆ ಯಾವುದೇ ಕಾರಣಕ್ಕೂ ರದ್ದಾಗುವುದಿಲ್ಲ. ಯುಜಿಸಿ ನಿರ್ದೇಶನದಂತೆ ಪರೀಕ್ಷೆ ನಡೆಯ ಲಿದೆ ಎಂದು ತೀರ್ಪು ನೀಡಿದೆ. ಈ ತೀರ್ಪಿ ನಿಂದಾಗಿ ಪರೀಕ್ಷೆ ಆಯೋಜನೆಗೆ ಸಂಬಂಧಿ ಸಿದ ಗೊಂದಲಕ್ಕೆ ತೆರೆ ಬಿದ್ದಿದೆ.

ಪರೀಕ್ಷೆಗಳನ್ನು ಕಡ್ಡಾಯವಾಗಿ ನಡೆಸಲೇ ಬೇಕು. ಯಾವಾಗ ನಡೆಸಬೇಕು ಎಂಬುದು ರಾಜ್ಯಗಳ ವಿವೇಚನೆಗೆ ಬಿಟ್ಟಿದ್ದು ಎಂದು ಕೋರ್ಟ್ ತೀರ್ಪು ತಿಳಿಸಿದೆ.

 
 
 
 
 
 
 
 
 
 
 

Leave a Reply