ಸಾರ್ವಜನಿಕ ಸ್ಥಳದಲ್ಲಿ ಗಣೇಶ ಪ್ರತಿಷ್ಠಾಪನೆ ನಿಷೇಧಕ್ಕೆ ಚಿಂತನೆ 

ಬೆಂಗಳೂರು: ಕೋವಿಡ್ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಗಣೇಶ ಚತುರ್ಥಿ ವೇಳೆ ಸಾರ್ವಜನಿಕ ಸ್ಥಳದಲ್ಲಿ ಗಣೇಶ ಪ್ರತಿಷ್ಠಾಪನೆ ಹಾಗೂ ಉತ್ಸವ ನಿಷೇಧಕ್ಕೆ ಚಿಂತನೆ ನಡೆಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥಪ್ರಸಾದ್ ತಿಳಿಸಿದ್ದಾರೆ.

ನಗರದಲ್ಲಿ ಸೋಂಕಿತರ ಸಂಖ್ಯೆ 50 ಸಾವಿರ ದಾಟಿದ್ದು, 12 ಸಾವಿರಕ್ಕೂ ಅಧಿಕ ರಸ್ತೆ ಮತ್ತು ಮನೆಗಳನ್ನು ಕಂಟೇನ್ಮೆಂಟ್ ಮಾಡಲಾಗಿದೆ. ಗಣೇಶ ಉತ್ಸವ ಆಚರಣೆ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವುದರಿಂದ ಸೋಂಕು ಹರಡುವ ಸಾಧ್ಯತೆಯಿದೆ. ಹೀಗಾಗಿ, ರಸ್ತೆಗಳು, ದೇವಾಲಯ ಆವರಣ ಹಾಗೂ ಗಲ್ಲಿಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡದಿರಲು ಚರ್ಚೆ ಮಾಡಲಾಗಿದೆ. ಈ ಬಗ್ಗೆ ಸರ್ಕಾರಕ್ಕೂ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.

ಸಾರ್ವಜನಿಕರು ತಮ್ಮ ಮನೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಅವಕಾಶ ನೀಡಲಾಗುವುದು.  ಈ ಮೂರ್ತಿಗಳನ್ನು ವಿಸರ್ಜನೆ ಮಾಡಲು ಬಿಬಿಎಂಪಿಯಿಂದ ಮೊಬೈಲ್ ವಾಹನಗಳ ವ್ಯವಸ್ಥೆ ಮಾಡಲಾಗುವುದು. ಮನೆಯಲ್ಲಿ ಪ್ರತಿಷ್ಠಾಪಿಸಿದ ಮೂರ್ತಿಗಳ ವಿಸರ್ಜನೆಗೆ ಹೊರಗಡೆ ಬಂದು ಗುಂಪು ಸೇರುವುದಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂದು ಮಂಜುನಾಥ ಪ್ರಸಾದ್ ತಿಳಿಸಿದರು

 
 
 
 
 
 
 
 
 
 
 

Leave a Reply