ನಾಳೆ ಸಂಜೆ ಪ್ರಕಟಗೊಳ್ಳಲಿದೆ ದ್ವಿತೀಯ ಪಿಯುಸಿ ಫಲಿತಾಂಶ : ಸಚಿವ ಸುರೇಶ್ ಕುಮಾರ್

ಬೆಂಗಳೂರು : ರಾಜ್ಯದಲ್ಲಿ ದ್ವಿತೀಯ ಪಿಯುಸಿ ನಾಳೆ ಸಂಜೆ 4.30ಕ್ಕೆ ಪ್ರಕಟವಾಗಲಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ನಾಳೆ ಸಂಜೆ 4.30 ಕ್ಕೆ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾಗಲಿದ್ದು, ಗ್ರೇಡ್ ಬದಲಿಗೆ ಅಂಕಗಳನ್ನೇ ನೀಡಲು ಪಿಯುಸಿ ಬೋರ್ಡ್ ನಿರ್ಧಾರ ಮಾಡಿದೆ. ಹೀಗಾಗಿ ಅಂಕಗಳ ಮಾದರಿಯಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದಿದ್ದಾರೆ.

ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಈ ಬಾರಿ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿತ್ತು. ಹೀಗಾಗಿ ಎಸ್‌ಎಸ್‌ಎಲ್‌ಸಿ ಹಾಗೂ ಪ್ರಥಮ ಪಿಯುಸಿ ಅಂಕಗಳ ಆಧಾರದ ಮೇಲೆ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ. ಈಗಾಗಲೇ ಅಂಕಗಳನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸ ಲಾಗಿದ್ದು, ಅಂತಿಮ ಫಲಿತಾಂಶ ನಾಳೆ ಹೊರಬೀಳಲಿದೆ.

ಈ ಬಾರಿ ಇಲಾಖೆ ಪ್ರಕಟಿಸುವ ಫಲಿತಾಂಶದ ಬಗ್ಗೆ ಅಸಮಾಧಾನ ಹೊಂದಿರುವ ವಿದ್ಯಾರ್ಥಿಗಳು ಪ್ರತ್ಯೇಕವಾಗಿ ಪರೀಕ್ಷೆಯನ್ನು ಬರೆಯಲು ಅವಕಾಶವನ್ನು ಶಿಕ್ಷಣ ಇಲಾಖೆ ಕಲ್ಪಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾಗಿರುವ ಹಿನ್ನೆಲೆಯಲ್ಲಿ ಈ ಬಾರಿಯ ಸಿಇಟಿ ರಾಂಕ್‌ ಪ್ರಕಟಿಸುವಾಗ ಕೇವಲ ಸಿಇಟಿ ಅಂಕಗಳನ್ನು ಮಾತ್ರವೇ ಪರಿಗಣಿಸುವುದಾಗಿ ಶಿಕ್ಷಣ ಇಲಾಖೆ ಹೇಳಿದೆ.

 
 
 
 
 
 
 
 
 
 
 

Leave a Reply