ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು: ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಗೊಂಡಿದ್ದು, ಈ ಬಗ್ಗೆ ಶುಕ್ರವಾರ ಸುದ್ಧಿಗೋಷ್ಠಿ ನಡೆಸಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ. ವಿದ್ಯಾರ್ಥಿಗಳನ್ನು ಗ್ರೇಡ್ ಆಧಾರದಲ್ಲಿ ಪಾಸ್ ಮಾಡಲು ಸರ್ಕಾರ ತೀರ್ಮಾನ ಮಾಡಿದೆ.

ರಾಜ್ಯಾದ್ಯಂತ ಪೋಷಕರ ಮತ್ತು ವಿದ್ಯಾರ್ಥಿಗಳ ಅಭಿಪ್ರಾಯಗಳನ್ನು ಪರೀಕ್ಷೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಪಡೆದು ಅವುಗಳ ಆಧಾರದಲ್ಲಿ ಮತ್ತು ಕೋವಿಡ್ ಸಂದಿಗ್ಧ ಪರಿಸ್ಥಿತಿಯಲ್ಲಿ ತಜ್ಞರು ಪರೀಕ್ಷೆ ನಡೆಸಲು ಪೂರಕ ವಾತಾವರಣವಿಲ್ಲ ಎಂದು ಹೇಳಿದ ಬೆನ್ನಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. 

ಜುಲೈ ಮೂರನೇ ವಾರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯಲಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply