ಮಂಡ್ಯದಿಂದ ಬೆಂಗಳೂರಿನತ್ತ ಬರುವ ವೇಳೆ ಕಾರಿನ ಎರಡು ಟೈರುಗಳು ಸ್ಪೋಟಗೊಂಡು ಡಿವೈಡರ್‌ಗೆ ಡಿಕ್ಕಿ ಹೊಡೆದಿರುವ ಘಟನೆ ರಾಮನಗರದಲ್ಲಿ ನಡೆದಿದೆ.
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಘಟನೆ ನಡೆದಿದ್ದು ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ರಾಮನಗರದ ಕೆಂಪನಹಳ್ಳಿ ಬಳಿ ಘಟನೆ ನಡೆದಿದ್ದು ಗಾಯಾಳುಗಳನ್ನು ಬಿಡದಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.






