ಸದ್ಯದ ಪರಿಸ್ಥಿತಿಯಲ್ಲಿ ವೀಕೆಂಡ್ ಕರ್ಫ್ಯೂ ಮಾತ್ರ ಜಾರಿಯಲ್ಲಿರಲಿದೆ: ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ವಾರಾಂತ್ಯ ಕರ್ಫ್ಯೂ ರಾಜ್ಯಾದ್ಯಂತ ಯಶಸ್ವಿಯಾಗಿದ್ದು, ಜನ ಸಹಕರಿಸಿದ್ದಾರೆ. ಇದು ಕೋವಿಡ್ ನಿಯಂತ್ರಣಕ್ಕೂ ಸಹಕಾರಿಯಾಗಿದೆ. ಆದರೆ ವೀಕೆಂಡ್ ಕರ್ಫ್ಯೂ ವಿಸ್ತರಣೆ ಕುರಿತು ಸರ್ಕಾರದ ಮಟ್ಟದಲ್ಲಿ ಯಾವುದೇ ಚರ್ಚೆಯಾಗಿಲ್ಲ. ಶನಿವಾರ ಸಂಜೆ ಮುಖ್ಯಮಂತ್ರಿಗಳ ಜೊತೆ ನಡೆದ ಸಭೆಯಲ್ಲಿಯೂ ಈ ಕುರಿತು ಚರ್ಚೆಯಾಗಿಲ್ಲ. ಸದ್ಯಕ್ಕೆ ಯಥಾಸ್ಥಿತಿ ಮುಂದುವರೆಯಲಿದೆ ಎಂದು ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದರು.

ಕೇಂದ್ರ ಸರ್ಕಾರ ನಾವು ಕೇಳಿರುವುದಕ್ಕಿಂತಲೂ ಹೆಚ್ಚಿನ ಅಂದರೆ 8೦೦ ಟನ್ ಆಮ್ಲಜನಕವನ್ನು ನೀಡಿದೆ. ಸದ್ಯದ ಪರಿಸ್ಥಿತಿಯಲ್ಲಿ ಆಮ್ಲಜನಕದ ಬೇಡಿಕೆ ಮೇಲಿನ ಹೊರೆಯನ್ನು ಕಡಿಮೆ ಮಾಡಿದೆ.ಮುಂಬರುವ ದಿನಗಳಲ್ಲಿ ಎಲ್ಲರಿಗೂ ಆಕ್ಸಿಜನ್ ಸಿಗಲಿದೆ ಎಂದರು.ಎಪ್ರಿಲ್ 30ರವರೆಗೆ ರಾಜ್ಯ ಸರ್ಕಾರದ ಬಳಿ 50000 ರೆಮ್‌ಡಿಸಿವಿರ್ ಔಷಧೀಯ ಸಂಗ್ರಹ ಇತ್ತು. ಕೇಂದ್ರ ಸರ್ಕಾರ 1.22 ಲಕ್ಷ ರೆಮ್ ಡಿಸಿವಿರ್ ಔಷಧವನ್ನು ಪೂರೈಸುವ ಭರವಸೆ ನೀಡಿದೆ. ಇದಕ್ಕಾಗಿ ಕೇಂದ್ರ ಸರ್ಕಾರಕ್ಕೆ ನಾನು ಧನ್ಯವಾದ ಅರ್ಪಿಸುತ್ತೇನೆ ಎಂದರು. ಮೇ 1 ರನಂತರ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಮೊದಲ ಡೋಸ್ ಹಾಗೂ. 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗುತ್ತದೆ.‌ ಲಸಿಕೆಯ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ತಿಳಿಸಿದರು.

ಸದ್ಯದ ಪರಿಸ್ಥಿತಿಯಲ್ಲಿ ವೀಕೆಂಡ್ ಕರ್ಫ್ಯೂ ಮಾತ್ರ ಜಾರಿಯಲ್ಲಿರುತ್ತದೆ. ಅದನ್ನು ವಾರದ ದಿನಗಳಿಗೂ ವಿಸ್ತರಿಸುವ ಊಹಾಪೋಹಗಳ ಕುರಿತು ವ್ಯಾಖ್ಯಾನ ಮಾಡುವುದಿಲ್ಲ ಎಂದು ಸಚಿವ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

 
 
 
 
 
 
 
 
 
 
 

Leave a Reply