ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬೆಂಗಾವಲು ವಾಹನಕ್ಕೆ ಕಾರು ಡಿಕ್ಕಿ

ಉತ್ತರ ಕನ್ನಡ ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಆಗಮಿಸುತ್ತಿದ್ದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬೆಂಗಾವಲು ವಾಹನಕ್ಕೆ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕಾರು ಡಿಕ್ಕಿ ಹೊಡೆದಿರುವ ಘಟನೆ ಸಂಭವಿಸಿದೆ.

ಈ ವೇಳೆ ಸಚಿವರು ಕಾರಿನಲ್ಲಿರಲಿಲ್ಲ ಎಂದು ತಿಳಿದು ಬಂದಿದೆ. ಸಚಿವರ ಕಾರಿನಲ್ಲಿದ್ದ ಕೆಲವರಿಗೆ ಚಿಕ್ಕ ಪುಟ್ಟ ಗಾಯಗಳಾಗಿದ್ದು ಎರಡು ವಾಹನಗಳು ಸ್ವಲ್ಪ ಜಕಂ ಆಗಿವೆ.ಬೆಳಿಗ್ಗೆ ಹುಬ್ಬಳ್ಳಿಗೆ ಆಗಮಿಸಿದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಅವರು ಹುಬ್ಬಳ್ಳಿಯಲ್ಲಿ ಆತ್ಮೀಯವಾಗಿ ಬರಮಾಡಿಕೊಂಡರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಾಂತ ಕಚೇರಿಗೆ ಭೇಟಿ ನೀಡಿ ನಂತರ ಮುಖ್ಯ ಮಂತ್ರಿಗಳು ತಮ್ಮ ದಿವಂಗತ ತಂದೆ ಎಸ್. ಆರ್. ಬೊಮ್ಮಾಯಿ ಮತ್ತು ತಾಯಿಯ ಪ್ರತಿಮೆಗಳಿಗೆ ಗೌರವ ನಮನ ಸಲ್ಲಿಸಿ ಉತ್ತರ ಕನ್ನಡ ಜಿಲ್ಲೆಗೆ ಪ್ರಯಾಣ ಬೆಳೆಸಿದರು.

 
 
 
 
 
 
 
 
 
 
 

Leave a Reply