ಬಿಪಿಎಲ್ ಕುಟುಂಬಗಳಿಗೆ 75 ಯೂನಿಟ್ ವಿದ್ಯುತ್ ಉಚಿತ!

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಬಿಪಿಎಲ್ ಕುಟುಂಬಗಳಿಗೆ 75 ಯೂನಿಟ್ ಉಚಿತ ವಿದ್ಯುತ್ ಯೋಜನೆ ಶೀಘ್ರ ಅನುಷ್ಠಾನಗೊಳಿಸಲು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.

ವಿಕಾಸ ಸೌಧದಲ್ಲಿ 2022-23ನೇ ಸಾಲಿನ ಎಸ್‌ಸಿಎಸ್‌ಪಿ. ಟಿಎಸ್‌ಪಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿ ಅವರು, ಪರಿಶಿಷ್ಟ ಜಾತಿ ಮತ್ತು ಪಂಗಡದ ಬಿಪಿಎಲ್ ಕುಟುಂಬಗಳಿಗೆ ಉಚಿತ 75 ಯೂನಿಟ್ ವಿದ್ಯುತ್ ಸರಬರಾಜು ಮಾಡುವ ಯೋಜನೆ ರೂಪಿಸಲಾಗಿದೆ. ಇಂಧನ ಇಲಾಖೆ ಅಧಿಕಾರಿಗಳು ಈ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಬೇಕೆಂದು ಸೂಚಿಸಿದರು.

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 20 ಸಾವಿರ ರೂ. ಗಳ ಘಟಕ ಯೋಜನೆಯ ಸಹಾಯಧನದಲ್ಲಿ ಸ್ವಚ್ಛ ಭಾರತ ಕಾರ್ಯಕ್ರಮ ಅನುಷ್ಠಾನಗೊಳಿಸಬೇಕು. ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ಅಭಿವೃದ್ಧಿಗೆ ಸರ್ಕಾರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ವಿಶೇಷವಾಗಿ ಈ ಸಮುದಾಯಕ್ಕೆ ವಸತಿ ಯೋಜನೆ ಆದ್ಯತೆ ಮೇರೆಗೆ ಅನುಷ್ಠಾನಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

 
 
 
 
 
 
 
 
 
 
 

Leave a Reply