ಬೆಂಗಳೂರು : ಮೆಸ್ಕಾಂ ವ್ಯಾಪ್ತಿಗೆ ಬರುವ ವಿಧಾನಸಭಾ ಕ್ಷೇತ್ರಗಳ ಶಾಸಕರಗಳ ಸಭೆ

ಬೆಂಗಳೂರು : ಇಂಧನ ಕನ್ನಡ ಹಾಗೂ ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರಿನಲ್ಲಿ ಮೆಸ್ಕಾಂ ವ್ಯಾಪ್ತಿಗೆ ಬರುವ ವಿಧಾನಸಭಾ ಕ್ಷೇತ್ರಗಳ ಶಾಸಕರಗಳ ಸಭೆ ಆಯೋಜಿಸಲಾಗಿತ್ತು.

ಈ ಸಭೆಯಲ್ಲಿ ಇಂಧನ ಇಲಾಖೆಗೆ ಸಂಬಂಧಪಟ್ಟ ಹಾಗೆ ಮೆಸ್ಕಾಂ ವ್ಯಾಪ್ತಿಯಲ್ಲಿ ಎದುರಾಗುತ್ತಿರುವ ಸಮಸ್ಯೆಗಳು ಮತ್ತು ಅದಕ್ಕೆ ಪರಿಹಾರೋಪಾಯಗಳನ್ನು ಕುರಿತಂತೆ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಶಾಸಕರು ಪ್ರಸ್ತಾಪಿಸಿದ ಸಮಸ್ಯೆಗಳ ಬಗ್ಗೆ ಸೂಕ್ತ ಪರಿಹಾರ ಕ್ರಮ ಗಳನ್ನು ಕೈಗೊಳ್ಳುವಂತೆ ಸಚಿವ ಸುನಿಲ್ ಕುಮಾರ್ ಸೂಚಿಸಿದರು.

ಗೃಹ ಸಚಿವ ಅರಗ ಜ್ಞಾನೇಂದ್ರ ಸೇರಿದಂತೆ ಮೆಸ್ಕಾಂ ವ್ಯಾಪ್ತಿಗೆ ಸೇರಿದ ಶಾಸಕರು, ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಿ ಕುಮಾರ್ ನಾಯಕ್, ಡಾ. ಎನ್ ಮಂಜುಳಾ ಹಾಗೂ ಇಲಾಖೆಯ ಇತರ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply