ಮಂಗಳವಾರದಿಂದಲೇ ʼಅಂತರರಾಜ್ಯ ಬಸ್‌ ಪ್ರಯಾಣʼ ಆರಂಭ

ಬೆಂಗಳೂರು: ರಾಜ್ಯದಲ್ಲಿ ಲಾಕ್‌ಡೌನ್‌ ಸಡಿಲಿಕೆ ಹಿನ್ನೆಲೆಯಲ್ಲಿ ನಾಳೆಯಿಂದ ಅಂತರರಾಜ್ಯ ಪ್ರಯಾಣ ಆರಂಭವಾಗಲಿದ್ದು, ಅಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಬಸ್‌ ಓಡಾಟ ಶುರುವಾಗಲಿದೆ ಎಂದು ಕರ್ನಾಟಕ ರಸ್ತೆ ಸಾರಿಗೆ ನಿಗಮ ತಿಳಿಸಿದೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ನಿಗಮ, ನಾಳೆಯಿಂದ ( ಮಂಗಳವಾರ)ದಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಆಯಾ ರಾಜ್ಯಗಳ ಮಾರ್ಗಸೂಚಿಗಳನ್ವಯ ಪ್ರಯಾಣಿಕರ ದಟ್ಟಣೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ಶೇ.50 ಆಸನ ಸಾಮರ್ಥ್ಯದೊಂದಿಗೆ ಸಾರಿಗೆ ಕಾರ್ಯಚರಣೆ ಪ್ರಾರಂಭಿಸಲಾಗುತ್ತಿದೆ ಎಂದಿದೆ.

ಕೋವಿಡ್‌ ಮಾರ್ಗಸೂಚಿ ಅನ್ವಯ ಬಸ್‌ಗಳು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಓಡಾಟ ನಡೆಸಲಿವೆ.

 
 
 
 
 
 
 
 
 
 
 

Leave a Reply