ಜುಲಾಯಿ 26 ರಿಂದ ಕಾಲೇಜು ಆರಂಭ? ~ ಬಿ.ಎಸ್. ಯಡಿಯೂರಪ್ಪ

ಭಾನುವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ರಾಜ್ಯದಲ್ಲಿ ನಾಲ್ಕನೇ ಹಂತದ ಅಲ್ ಲಾಕ್, ನಿಯಮ ಸಡಿಲಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಚರ್ಚೆಗಳು ನಡೆದು ಕೆಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್, ಸಚಿವರುಗಳಾದ ಆರ್. ಅಶೋಕ್, ಅರವಿಂದ ಲಿಂಬಾವಳಿ, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಅಧಿಕೃತ ಮಾರ್ಗಸೂಚಿ ಕೆಲವೇ ಗಂಟೆಗಳಲ್ಲಿ ಪ್ರಕಟವಾಗಲಿದೆ. ಶೇ. 50 ರಷ್ಟು ಸಾಮರ್ಥ್ಯದೊಂದಿಗೆ ಸಿನೆಮಾ ಥಿಯೇಟರ್ ಕಾರ್ಯನಿರ್ವಹಣೆಗೆ ಅವಕಾಶ.

* ಜುಲಾಯಿ 26ರಿಂದ ಕಾಲೇಜುಗಳ (ಉನ್ನತ ಶಿಕ್ಷಣ ಮಾತ್ರ) ಪುನರಾರಂಭ. * ಮೊದಲ ಡೋಸ್ ಕೊರೊನಾ ಲಸಿಕೆ ಪಡೆದಿರುವ ಬೋಧಕ-ಬೋಧಕೇತರರು ಹಾಗೂ ವಿದ್ಯಾರ್ಥಿಗಳಿಗೆ ಮಾತ್ರ ಆಫ್ ಲೈನ್ ತರಗತಿಗಳಿಗೆ ಹಾಜರಾಗಲು ಅನುಮತಿ. * ರಾತ್ರಿ ಕರ್ಫ್ಯೂ (ನೈಟ್ ಕರ್ಫ್ಯೂ) ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ.

 
 
 
 
 
 
 
 
 
 
 

Leave a Reply