ಸಂಸದರು, ಶಾಸಕರು ತಮ್ಮ ಕ್ಷೇತ್ರಗಳಲ್ಲೇ ಉಳಿದು ಕೊರೋನಾ ನಿಯಮ ಪಾಲನೆ ಖಚಿತಪಡಿಸಬೇಕು: ಸಿಎಂ ಮನವಿ

ಬೆಂಗಳೂರು : ದಿನೇ ದಿನೇ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದಿನಿಂದ ಲಾಕ್ ಡೌನ್ ಘೋಷಿಸಲಾಗಿದೆ.ಇದರಿಂದ ಎಲ್ಲಾ ಸಂಸದರು ಮತ್ತು ಶಾಸಕರು ತಮ್ಮ ಕ್ಷೇತ್ರಗಳಲ್ಲೇ ಉಳಿದು ಕಟ್ಟುನಿಟ್ಟಿನ ನಿಯಮಗಳು ಜಾರಿಯಾಗುವುದನ್ನು ಖಚಿತಪಡಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.

ಸಿಎಂ ಈ ಬಗ್ಗೆ ಟ್ವೀಟ್ ಮಾಡಿದ್ದು, ಕೋವಿಡ್ ಸೋಂಕಿನ ಸರಪಳಿಯನ್ನು ಮುರಿಯಲು ಇಂದಿನಿಂದ ಮತ್ತಷ್ಟು ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಎಲ್ಲಾ ಸಂಸದರು ಮತ್ತು ಶಾಸಕರು ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಉಳಿದು, ಉದ್ದೇಶ ಈಡೇರುವ ನಿಟ್ಟಿನಲ್ಲಿ ಕಟ್ಟುನಿಟ್ಟಾಗಿ ನಿಯಮಗಳು ಜಾರಿಯಾಗುವುದನ್ನು ಖಚಿತಪಡಿಸಬೇಕು ಎಂದು ಮನವಿ ಮಾಡುತ್ತೇನೆ ಎಂಬುದಾಗಿ ಬರೆದುಕೊಂಡಿದ್ದಾರೆ.

 
 
 
 
 
 
 
 
 
 
 

Leave a Reply