ಇನ್ನು ಮೂರು ದಿನದಲ್ಲಿ ಲಾಕ್ಡೌನ್ ವಿಸ್ತರಣೆ ಬಗ್ಗೆ ತೀರ್ಮಾನ – ಸಿಎಂ ಬಿ.ಎಸ್.ವೈ

ಬೆಂಗಳೂರು: ರಾಜ್ಯದಲ್ಲಿ ಲಾಕ್ಡೌನ್ ಇನ್ನೂ ಮೇ. 24 ರವರೆಗೂ ಇದೆ.ಎರಡು ಮೂರು ದಿನಗಳ ಬಳಿಕ ಲಾಕ್ಡೌನ್ ವಿಸ್ತರಣೆ ಬಗ್ಗೆ ನಿರ್ಧಾರ ಮಾಡಲಾಗುವುದು. ಅಲ್ಲದೇ ಲಾಕ್ಡೌನ್ ಸಂತ್ರಸ್ತರಿಗೆ ವಿಶೇಷ ಪ್ಯಾಕೇಜ್ ಬಗ್ಗೆ ಸಹ ಚರ್ಚೆ ಮಾಡಲಾಗುವುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.

ಜಿಲ್ಲಾಡಳಿತಗಳ ಜತೆ ಸಭೆ ನಡೆಸಿದ ಬಳಿಕ ಸಿ.ಎಂ ಮಾತನಾಡಿ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ಮೊದಲು ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಡಳಿತಗಳ ಜತೆ ಸಭೆ ಮಾಡಿದ್ದೇನೆ. ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಹೆಚ್ಚಿದ್ದು, ನಿಯಂತ್ರಣಕ್ಕೆ ಸೂಚನೆ ಕೊಟ್ಟಿದ್ದೇನೆ. ಟೆಸ್ಟ್ ರಿಪೋರ್ಟ್ 24 ಗಂಟೆ ಒಳಗೆ ಕೊಡಬೇಕು. ಹೋಂ ಐಸೋಲೆಷನ್ ಇರೋರಿಗೆ ಮೆಡಿಕಲ್ ಕಿಟ್ ನೀಡಬೇಕು. ಮನೆ ಮನೆಗೂ ಹೋಗಿ ಟೆಸ್ಟ್ ಮಾಡಲು ಹಾಗೂ ಸಕಾಲದಲ್ಲಿ ಚಿಕಿತ್ಸೆ ಕೊಡಲು ಸೂಚಿಸಿದ್ದೇನೆ ಎಂದರು.

ಗ್ರಾಮೀಣ ಭಾಗದಲ್ಲಿ ಆಸ್ಪತ್ರೆ ಇಲ್ಲದಿದ್ದರೆ ಕೋವಿಡ್ ಕೇರ್ ಸೆಂಟರ್ ದಾಖಲು ಮಾಡಬೇಕು. ಆಕ್ಸಿಜನ್ ಸಮಸ್ಯೆ ಇದ್ರೆ ನೆರೆ ಜಿಲ್ಲೆಯೊಂದಿಗೆ ಹೊಂದಾಣಿಕೆ ಮಾಡಿಕೊಂಡು ಸರಿದೂಗಿಸಿಕೊಳ್ಳಬೇಕು.ಪರಿಸ್ಥಿತಿಗೆ ಅನುಗುಣವಾಗಿ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ ಎಂದರು.

ಬ್ಲಾಕ್ ಫಂಗಸ್ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದೇವೆ.ಇದಕ್ಕಾಗಿ ಇಂದಿನಿಂದ ಬೋರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಶಿವಮೊಗ್ಗ, ಮೈಸೂರು, ಕಲ್ಬುರ್ಗಿ, ಹುಬ್ಬಳ್ಳಿಯಲ್ಲಿ ಚಿಕಿತ್ಸೆ ಮಾಡಲು ಸೂಚನೆ ಕೊಟ್ಟಿದ್ದೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.

 
 
 
 
 
 
 
 
 
 
 

Leave a Reply