ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು 5 ಜನರಿಗೆ ಮಾತ್ರವೇ ಅವಕಾಶ

ಬೆಂಗಳೂರು : ಕೊರೊನಾ ಎರಡನೇ ಅಲೆಯ ಮಹಾಸ್ಪೋಟದ ಹಿನ್ನೆಲೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳುತ್ತಿರುವ ರಾಜ್ಯ ಸರ್ಕಾರ ಇದೀಗ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಐದು ಮಂದಿಗೆ ಮಾತ್ರ ಅವಕಾಶ ನೀಡಿ ಹೊಸ ಆದೇಶ ಹೊರಡಿಸಿದೆ.

ಕಳೆದ ವಾರ ರಾಜ್ಯದಲ್ಲಿ ಕರ್ಪ್ಯೂ ಜಾರಿ ಮಾಡುವ ಸಂದರ್ಭದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರದ ಸಂದರ್ಭದಲ್ಲಿ 20 ಜನರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಿತ್ತು. ಇದೀಗ ಷಮಾರ್ಗಸೂಚಿ ಪಾಲಿಸಿ 5 ಮಂದಿ ಮಾತ್ರ ಭಾಗಿಯಾಗಬೇಕು ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಆದೇಶ ಹೊರಡಿಸಿದ್ದಾರೆ.

 

 

 

 

Leave a Reply