ರಾಜ್ಯ ಸರ್ಕಾರದಿಂದ 1,250 ಕೋಟಿ ರೂ ಪರಿಹಾರ ಪ್ಯಾಕೇಜ್ ಘೋಷಣೆ

ಬೆಂಗಳೂರು:ಕೊರೋನಾ ಎರಡನೇ ಅಲೆ ತೀವ್ರವಾಗಿ ಹೆಚ್ಚಳವಾಗಿದ್ದರಿಂದ ಲಾಕ್ ಡೌನ್ ಮಾಡುವುದು ಅನಿವಾರ್ಯವಾಗಿತ್ತು. ಈ ಲಾಕ್ ಡೌನ್ ನಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿರುವವರಿಗೆ ಸರ್ಕಾರ 1,250 ಕೋಟಿ ರೂ.ಗೂ ಅಧಿಕ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಇಂದು ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇಂದು ಸಚಿವ ಸಂಪುಟ ಸಭೆ ನಡೆಸಿ ಚರ್ಚೆ ಮಾಡಿ ತೆಗೆದುಕೊಂಡ ತೀರ್ಮಾನಗಳು, ಪರಿಹಾರಗಳನ್ನು ಮಾಧ್ಯಮ ಪ್ರತಿನಿಧಿಗಳ ಮುಂದೆ ಪ್ರಕಟಿಸಿದರು.

 ಹಣ್ಣು, ತರಕಾರಿ ನಷ್ಟಕ್ಕೆ ಪ್ರತಿ ಹೆಕ್ಟೇರ್ ಗೆ 10 ಸಾವಿರ, ಹಣ್ಣು ತರಕಾರಿ ಬೆಳೆಗೆ ಒಂದು ಹೆಕ್ಟೇರ್ ಗೆ ಕನಿಷ್ಠ 10 ಸಾವಿರ ಸಹಾಯಧನ, ಹೂ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ ಗೆ 10 ಸಾವಿರ ಸಹಾಯಧನ ನೀಡಲಾಗುವುದು.ಆಟೋ, ಕ್ಯಾಬ್ ಚಾಲಕರಿಗೆ 3 ಸಾವಿರ, ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ, ಅಗಸ, ಚಮ್ಮಾರ, ಕಮ್ಮಾರ ಸೇರಿದಂತೆ ಅಸಂಘಟಿತರಿಗೆ 2 ಸಾವಿರ, ರಸ್ತೆಬದಿ ವ್ಯಾಪಾರಿಗಳಿಗೆ 2 ಸಾವಿರ ಸಹಾಯಧನ ಘೋಷಿಸಿದ್ದಾರೆ. ಕಲಾವಿದರು, ಕಲಾ ತಂಡಕ್ಕೆ 3 ಸಾವಿರ ಹಾಗೂ ಸಾಲ ಮರು ಪಾವತಿಗೆ 3 ತಿಂಗಳ ಅವಕಾಶ ಇದ್ದು, 3 ತಿಂಗಳ ಬಡ್ಡಿ ಸರ್ಕಾರವೇ ಭರಿಸಲಿದೆ ಎಂದರು. 

5 ಕೆಜಿ ಅಕ್ಕಿಯನ್ನು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ನೀಡಲಾಗುವುದು. ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೂ ರೇಷನ್ ಕೊಡಲಾಗುತ್ತದೆ. ಅಲ್ಲದೆ ಮೇ, ಜೂನ್ ರೇಷನ್ ಕೊಡಲಾಗುತ್ತೆ. ಪ್ಯಾಕೇಜ್ ನಲ್ಲಿ ಕಳೆದ ವರ್ಷದಂತೆ ಲೋಪ ಆಗದಂತೆ ಕ್ರಮವಹಿಸಲಾಗುತ್ತೆ. ಲಾಕ್ ಡೌನ್ ವಿಸ್ತರಣೆ ಬಗ್ಗೆ 23 ರಂದು ತೀರ್ಮಾನ ಮಾಡುತ್ತೇವೆ ಎಂದು ಸಿಎಂ ತಿಳಿಸಿದರು.

 
 
 
 
 
 
 
 
 
 
 

Leave a Reply