Janardhan Kodavoor/ Team KaravaliXpress
31.6 C
Udupi
Wednesday, December 8, 2021
Sathyanatha Stores Brahmavara

ಬೆಂಗಳೂರು ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ : ಇಬ್ಬರು ಗಂಭೀರ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಅಗ್ನಿ ದುರಂತಗಳು ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಇದೀಗ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರಿನ ಅತ್ತಿಬೆಲೆಯ ಕೈಗಾರಿಕಾ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡಿದ್ದು, ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಲ್ಲಿ ಓರ್ವನ ಸ್ಥಿತಿ ಚಿಂತಾಜನಕವಾಗಿದೆ.

ಫ್ಯಾಕ್ಟರಿ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಕೆಮಿಕಲ್ ಘಾಟು ತುಂಬಿಕೊಂಡಿದ್ದು, ದಟ್ಟ ಹೊಗೆ ಆವರಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಆದರೆ ಕೆಮಿಕಲ್ ಘಾಟಿನಿಂದ ಕಾರ್ಯಾಚರಣೆಗೆ ಅಡ್ಡಿಯುಂಟಾಗುತ್ತು ಎನ್ನಲಾಗಿದೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!