ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ; 35 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಕರೆಂಟ್ ಶಾಕ್, ಆಸ್ಪತ್ರೆಗೆ ದಾಖಲು!

ಖಾಸಗಿ ಬಸ್  ಒಂದು  ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪ್ರಯಾಣಿಕರಿಗೆ ವಿದ್ಯುತ್ ಶಾಕ್ ತಗುಲಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಗೆಣಸಿನಕುಣಿ ಗ್ರಾಮದ ಬಳಿ ನಡೆದಿದೆ.

ಖಾಸಗಿ ಬಸ್ ಸಾಗರ ತಾಲೂಕಿನ ಹೊಳೆಬಾಗಿಲಿನಿಂದ ಸಾಗರಕ್ಕೆ ಹೊರಟಿದ್ದು, ಬಸ್ನಲ್ಲಿ 45 ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಬಸ್ನಲ್ಲಿದ್ದ 45 ಕ್ಕೂ ಪ್ರಯಾಣಿಕರಿಗೆ ವಿದ್ಯುತ್ ಶಾಕ್ ತಗುಲಿದ್ದು, ಕೂಡಲೇ ಅವರನ್ನ ಸಾಗರ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

 
 
 
 
 
 
 
 

Leave a Reply