ಕಾಲೇಜು ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು!

ಅನುಮಾನಸ್ಪದ ರೀತಿಯಲ್ಲಿ ಕಾಲೇಜು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮೈಸೂರಿನ ತಿ.ನರಸೀಪುರ ಪಟ್ಟಣದ ವಿದ್ಯೋದಯ ಕಾಲೇಜಿನಲ್ಲಿ ನಡೆದಿದೆ. ನಮಿತಾ (16) ವರ್ಷ ಮೃತ ವಿದ್ಯಾರ್ಥಿನಿಯಾಗಿದ್ದಾಳೆ.

ವಿದ್ಯೋದಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ನಮಿತಾ ಕಾಲೇಜಿಗೆ ಬಂದಿದ್ದಳು. ಕಾಲೇಜಿನಲ್ಲಿ ನಡೆಯುತ್ತಿದ್ದ ಡ್ಯಾನ್ಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಳು. ಬಳಿಕ ಏಕಾಏಕಿ ಕಾಲೇಜಿನಲ್ಲಿಯೇ ಪ್ರಜ್ಞೆತಪ್ಪಿ ಬಿದ್ದಳು. 

ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೋಯ್ದಲಾಯಿತು. ಆದರೆ ಮಾರ್ಗ ಮದ್ಯೆಯಲ್ಲೇ ಕೊನೆಯುಸಿರೆಳೆದಳು.ವಿದ್ಯಾರ್ಥಿನಿ ಸಾವಿನ ಪ್ರಕರಣ ಮುಚ್ಚಿ ಹಾಕಲು ಕಾಲೇಜು ಆಡಳಿತ ಮಂಡಳಿ ಯತ್ನಿಸಿದೆ ಎಂದು ಆರೋಪಿಸಲಾಗಿದೆ.

 
 
 
 
 
 
 
 
 
 
 

Leave a Reply