2 ದಿನದಲ್ಲಿ ಮದುವೆಯಾಗಬೇಕಿದ್ದ ಯುವತಿ ವರನ ಮನೆಯಲ್ಲೇ ಅನುಮಾನಾಸ್ಪದವಾಗಿ ಸಾವು!

2 ದಿನದಲ್ಲಿ ಮದುವೆಯಾಗಬೇಕಿದ್ದ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಟಿಬಿ ಡ್ಯಾಂ ಬಳಿ ನಡೆದಿದೆ.

ಐಶ್ವರ್ಯ ರೈ ಮೃತಪಟ್ಟ ಯುವತಿ. ಕೇವಲ 2 ದಿನಗಳಲ್ಲಿ ಯುವತಿ ಅಂತರ್ಜಾತಿ ಯುವಕನನ್ನು ವಿವಾಹವಾಗಲು ತಯಾರಾಗಿದ್ದಳು. ಆದರೆ ಯುವತಿ ಮದುವೆಯಾಗಬೇಕಿದ್ದ ವರನ ಮನೆಯಲ್ಲೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ.

ಯುವತಿ ಕೆಳ ಜಾತಿಯವಳು ಎಂಬ ಕಾರಣಕ್ಕೆ ಕೆಲವು ಷರತ್ತುಗಳ ಮೇಲೆ ಯುವಕನ ಕಡೆಯವರು ಮದುವೆಗೆ ಒಪ್ಪಿದ್ದರು. ಇದೇ ಕಾರಣಕ್ಕೆ ಯುವತಿಯ ಕೊಲೆಗೆ ಪ್ರಚೋದನೆ ನೀಡಲಾಗಿದೆ ಎಂದು ಐಶ್ವರ್ಯ ಪೋಷಕರು ಆರೋಪಿಸಿದ್ದಾರೆ. 

ಐಶ್ವರ್ಯ ಹಾಗೂ ವರ ಅಶೋಕ್ ಕಳೆದ 7-8 ವರ್ಷಗಳಿಂದ ಪ್ರೀತಿಸುತ್ತಿದ್ದರು. ನಮಗೂ ಅವರಿಗೂ ಹೊಂದಾಣಿಕೆ ಆಗಲ್ಲ, ನಾನು ಈ ಮದುವೆ ಬೇಡ ಎಂದು ಮಗಳಿಗೆ ಹೇಳಿದ್ದೆ. ನನ್ನ ಮಗಳು ಬಹಳ ಗಟ್ಟಿ ಮನಸ್ಸಿನವಳು. ಆಕೆ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಹೇಡಿಯಲ್ಲ. ಯುವಕನ ಮನೆಯವರೇ ಕೊಲೆ ಮಾಡಿದ್ದಾರೆ ಎಂದು ಯುವತಿಯ ಪೋಷಕರು ಆರೋಪಿಸಿದ್ದಾರೆ.

 
 
 
 
 
 
 
 

Leave a Reply