Janardhan Kodavoor/ Team KaravaliXpress
25.6 C
Udupi
Monday, June 27, 2022
Sathyanatha Stores Brahmavara

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ದೊರೆಸ್ವಾಮಿ ವಿಧಿವಶ

ಬೆಂಗಳೂರು : ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.ಶತಾಯುಷಿ ದೊರೆಯವರು ಇತ್ತೀಚಿಗೆ ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾಗಿದ್ದರು. ಆದರೆ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಇಂದು ಸಾವನ್ನಪ್ಪಿದ್ದಾರೆ.

ಹಾರೋಹಳ್ಳಿ ಶ್ರೀನಿವಾಸಯ್ಯ ದೊರೆಸ್ವಾಮಿ ಅವರು ಮೈಸೂರಿನ ಹಾರೋಹಳ್ಳಿಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸದ ನಂತರ ಬೆಂಗಳೂರಿಗೆ ಬಂದು ನೆಲೆಸಿದ್ರು. ಸೆಂಟ್ರಲ್ ಕಾಲೇಜಿನಲ್ಲಿ ಬಿಎಸ್ಸಿ ಪದವಿಯನ್ನು ಪಡೆದು ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಕಾಲೇಜು ಶಿಕ್ಷಣ ಪೂರೈಸಿದ ನಂತರದಲ್ಲಿ ಉಪನ್ಯಾಸಕರಾಗಿ ವೃತ್ತಿ ಜೀವನವನ್ನು ಆರಂಭಿಸಿದರು. ಕ್ವಿಟ್ ಇಂಡಿಯಾ ಚಳುವಳಿ ಕಾರ್ಯಕ್ರಮದಲ್ಲಿಯೂ ಭಾಗಿಯಾಗಿದ್ದರು.

ತರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಖಡಕ್ ಪತ್ರ ಬರೆಯುವ ಮೂಲಕ ಜೈಲು ವಾಸ ಅನುಭವಿಸಿದ್ದರು. ರೈತ ಪರ ಹೋರಾಟಗಾರರಿಗೂ ದೊರೆಸ್ವಾಮಿ ಗುರುತಿಸಿಕೊಂಡಿದ್ದಾರೆ. 

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!