ಉಡುಪಿ: ಕೊರೋನಾ ವೈರಸ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಪರಿಸ್ಥಿತಿ ನಿಯಂತ್ರಣದ ಕುರಿತು ಮತ್ತು ಜಿಲ್ಲೆಗಳ ಸ್ಥಿತಿಗತಿಯ ಬಗ್ಗೆ ಪ್ರಧಾನಿ ಮೋದಿ ಮಂಗಳವಾರ ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವೀಡಿಯೋ ಸಂವಾದದಲ್ಲಿ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಭಾಗಿಯಾದರು.
ಕೊರೋನಾದ ಎರಡನೆಯ ಅಲೆ ಹತೋಟಿಗೆ ತರುವ ಬಗ್ಗೆ ಪ್ರಧಾನಿ ಮೋದಿ ರಾಜ್ಯದ 17 ಜಿಲ್ಲಾಧಿಕಾರಿಗಳ ಸಭೆ ನಡೆಸುತ್ತಿದ್ದಾರೆ. ಉಡುಪಿಯ ಜಿಲ್ಲಾಧಿಕಾರಿ ಜಿ ಜಗದೀಶ್ ಕೂಡ ವೀಡಿಯೋ ಕಾನ್ಫರೆನ್ಸ್ ನಲ್ಲಿ ಭಾಗಿಯಾಗಿದರು.ಈ ವೇಳೆ ಉಡುಪಿ ಜಿಲ್ಲೆಯ ಕೋವಿಡ್ ಸ್ಥಿತಿ-ಗತಿ ಕುರಿತು ಮಾಹಿತಿ ಪಡೆದುಕೊಂಡ ಪ್ರಧಾನಿ ಮೋದಿ ಸೂಕ್ತ ಸಲಹೆಗಳನ್ನು ನೀಡಿದರು.