ಜ್ಯೋತಿಷಿಯೊಬ್ಬರ ಸಲಹೆ ಮೇರೆಗೆ ಗೋಕರ್ಣದಲ್ಲಿ ಹಿಂದೂ ಸಂಪ್ರದಾಯದಂತೆ ಪಿಂಡ ಪ್ರದಾನ ಮಾಡಿದ ಮುಸ್ಲಿಂ ಕುಟುಂಬ!

ಮುಸ್ಲಿಂ ಕುಟುಂಬವೊಂದು ಎರಡು ದಿನಗಳ ಹಿಂದೆ ಗೋಕರ್ಣದ ಕೋಟಿ ತೀರ್ಥದಲ್ಲಿ ಪಿತೃಪಕ್ಷದಲ್ಲಿ ಪಿತೃಕಾರ್ಯ ನೆರವೇರಿಸಿದೆ.

ಕಟ್ಟಿಗೆ ಕೆಲಸ ಮಾಡುವ ಕುಟುಂಬವೊಂದು ಧಾರವಾಡದ ಜ್ಯೋತಿಷಿಯೊಬ್ಬರ ಸಲಹೆ ಮೇರೆಗೆ ನಾರಾಯಣ ಬಲಿ, ತ್ರಿಪಿಂಡಿ ಶ್ರಾದ್ಧ ಮತ್ತು ತಿಲಹವನವನ್ನು ಗೋಕರ್ಣದ ಪಿತೃಶಾಲೆಯಲ್ಲಿ ನೆರವೇರಿಸಿದ್ದಾರೆ.

ಧಾರವಾಡದ ಧಾನೇಶ್ವರಿ ನಗರದ ಶಂಸಾದ್ ಎಂಬವರ ತಮ್ಮನಿಗೆ ಮದುವೆ ಸಂಬಂಧ ಸರಿಯಾಗಿ ಕೂಡಿ ಬರುತ್ತಿರಲಿಲ್ಲ ಅಂತಾ ಜ್ಯೋತಿಷಿ ಮೊರೆ ಹೋದಾಗ ಪಿತೃ ಕಾರ್ಯ ಕೈಗೊಳ್ಳಲು ಸಲಹೆ ನೀಡಿದ್ದರು.

ಅದರಂತೆ ಗೋಕಣಕ್ಕೆ ಬಂದು ಕ್ಷೇತ್ರ ಪುರೋಹಿತರಾದ ವೇ. ನಾಗರಾಜ ಭಟ್ ಗುರ್ಲಿಂಗ್ ಹಾಗೂ ವೇ. ಸುಬ್ರಹಣ್ಯ ಚಿತ್ರಿಗೆಮಠ ನೇತೃತ್ವದಲ್ಲಿ ಪೂಜಾ ಕಾರ್ಯ ನೆರವೇರಿಸಿದ್ದಾರೆ.

ಗೋಕರ್ಣದಲ್ಲಿ ಗೋವಾ ಕ್ರಿಶ್ಚಿಯನ್ ಮತ್ತು ವಿದೇಶಿಗರು ಇಂತಹ ಪಿತೃ ಕಾರ್ಯ ನೆರವೇರಿಸಿದ ಅನೇಕ ಉದಾಹರಣೆಗಳಿದ್ದು, ಮುಸ್ಲಿಂ ಕುಟುಂಬ ಪಿತೃಕಾರ್ಯ ಮಾಡಿದ್ದು ಇದೇ ಮೊದಲ ಬಾರಿಗೆ ಎನ್ನಲಾಗಿದೆ.

 
 
 
 
 
 
 
 
 
 
 

Leave a Reply