ಪರೀಕ್ಷೆ ಇಲ್ಲದೆ ದ್ವಿತೀಯ ಪಿಯು ಫಲಿತಾಂಶ ಪ್ರಕಟಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ಕೊರೋನಾ ಹಿನ್ನೆಲೆ ಸರ್ಕಾರ ದ್ವಿತೀಯ ಪಿಯು ಪರೀಕ್ಷೆಯನ್ನು ರದ್ದುಗೊಳಿಸಿ, ವಿದ್ಯಾರ್ಥಿಗಳ ಫಲಿತಾಂಶ ನೀಡಲು ಮುಂದಾಗಿತ್ತು. ಆದರೆ ಈಗ ಹೈಕೋರ್ಟ್ ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡಗೆ ತಡೆ ನೀಡಿದೆ.

ಕೇವಲ ಈ ಬಾರಿಯ ವಿದ್ಯಾರ್ಥಿಗಳನ್ನು ಮಾತ್ರ ಉತ್ತೀರ್ಣ ಮಾಡಿ ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುತ್ತದೆ ಎಂದು ಹೇಳಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ.

ಪಿಯು ವಿದ್ಯಾರ್ಥಿಗಳನ್ನು ಪಾಸ್ ಮಾಡಿದ ಬಳಿಕ ರಿಪೀಟರ್ಸ್ ವಿದ್ಯಾರ್ಥಿಗಳು, ಸರ್ಕಾರ ಅನ್ಯಾಯ ಮಾಡಿದೆ ಎಂದು ಕೋರ್ಟ್ ಮೊರೆ ಹೋಗಿದ್ದರು.ಹೈಕೋರ್ಟ್ ಸರ್ಕಾರದ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದು, ಸದ್ಯ ದ್ವಿತೀಯ ಪಿಯು ಫಲಿತಾಂಶ ಪ್ರಕಟಕ್ಕೆ ತಾತ್ಕಾಲಿಕ ತಡೆಯೊಡ್ಡಿದೆ.ಗುರುವಾರದವರೆಗೆ ಪಿಯುಸಿ ಫಲಿತಾಂಶ ಪ್ರಕಟ ಮಾಡದಿರುವಂತೆ ಹೈಕೋರ್ಟ್ ಸೂಚನೆ ನೀಡಿದೆ.

 
 
 
 
 
 
 
 
 
 
 

Leave a Reply