ಹಿಜಾಬ್ : ನಾಳೆಗೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ರಾಜ್ಯದಲ್ಲಿ ತೀವ್ರ ವಿವಾದ ಸೃಷ್ಟಿಸಿರುವ ಹಿಜಾಬ್‌ ಕೇಸರಿ ಶಾಲು ಪ್ರಕರಣದ ವಿಚಾರಣೆ ಹೈಕೋರ್ಟ್‌ ತ್ರೀ ಸದಸ್ಯ ಪೀಠದಲ್ಲಿ ನಡೆದಿದ್ದು, ವಿಚಾರಣೆ ನಾಳೆಗೆ ಮುಂದೂಡಿದೆ.

ನ್ಯಾ.ಕೃಷ್ಣಾ ಎಸ್‌.ದೀಕ್ಷಿತ್‌, ಸಿಜೆ ರಿತುರಾಜ್‌ ಅವಸ್ತಿ, ನ್ಯಾ.ಖಾಜಿ ಜೈಬಿನ್ನೀಸಾ ಮೊಹಿಯುದ್ದೀನ್‌ ಅವರನ್ನೊಳಗೊಂಡ ತ್ರಿಸದಸ್ಯ ಪೀಠದಿಂದ 6 ರಿಟ್‌ ಅರ್ಜಿ, ಕೆಲ ಮಧ್ಯಂತರ ಅರ್ಜಿಗಳ ವಿಚಾರಣೆ ನಡೆಯಿತು. ಸುದೀರ್ಘ ವಿಚಾರಣೆಯ ಬಳಿಕ ನಾಳೆಗೆ ಮುಂದೂಡಲಾಗಿದೆ. ನಾಳೆ ಮಧ್ಯಾಹ್ನ 2.30 ಕ್ಕೆ ವಿಚಾರಣೆ ನಡೆಯಲಿದೆ. ಅರ್ಜಿದಾರರ ಪರ ವಾದ ಮಂಡನೆಗೆ ವಕೀಲರು ನ್ಯಾಯಾಧೀಶರಲ್ಲಿ ಕೇಳಿಕೊಂಡಿದ್ದು, ಹೀಗಾಗಿ ನಾಳೆ ಮತ್ತೆ ಅರ್ಜಿ ವಿಚಾರಣೆ ನಡೆಯಲಿದೆ.

ಅರ್ಜಿದಾರರ ಪರ ವಕೀಲ ದೇವದತ್‌ ಕಾಮತ್‌ ಇಂದು ವಾದ ಮಂಡಿಸಿದರು.

Leave a Reply