ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಇನ್ನುಮುಂದೆ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ

ಬೆಂಗಳೂರು : ಇದುವರೆಗೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ( North East Karnataka Road Transport Corporation) ಎಂಬುದಾಗಿ ಕರೆಯಲಾಗುತ್ತಿದ್ದಂತ NEKRTCಯನ್ನು, ಇದೀಗ ರಾಜ್ಯ ಸರ್ಕಾರವು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ ಎಂಬುದಾಗಿ ಮರು ನಾಮಕರಣ ಮಾಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ, ಸಾರಿಗೆ ನಿಗಮಗಳ ಅಧಿನಿಯಮ 1950 ರ ( ಕೇಂದ್ರ ಅಧಿನಿಯಮ 64) ಕಲಮ್ ಮೂರರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೆಸರನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣವಾದ ನಂತರ ಈಶಾನ್ಯ ಸಾರಿಗೆಗೂ ಈ ರೀತಿ ಮರು ನಾಮಕರಣ ಮಾಡಬೇಕೆಂದು ಸ್ಥಳಿಯರ ಬಹುದಿನಗಳ ಬೇಡಿಕೆಯಿತ್ತು.ಹೀಗಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

 
 
 
 
 
 
 
 
 
 
 

Leave a Reply