ರಾಜ್ಯದಲ್ಲಿ ಮೇ. 10 ರಿಂದ 15 ದಿನ ಸಂಪೂರ್ಣ `ಲಾಕ್ ಡೌನ್’

ಬೆಂಗಳೂರು : ಕೊರೊನಾ ಪ್ರಕರಣಗಳು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮೇ. 10 ರಿಂದ 15 ದಿನ ಕರ್ನಾಟಕದಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲು ನಿರ್ಧರಿಸಲಾಗಿದೆ.

ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಸಚಿವರ ಜೊತೆಗೆ ನಡೆದ ಮಹತ್ವದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ 15 ದಿನ ಲಾಕ್ ಡೌನ್ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಘೋಷಣೆ ಬಾಕಿ ಇದೆ ಎನ್ನಲಾಗಿದ್ದು, ಇಂದು ಸಂಜೆ ವೇಳೆಗೆ ಘೋಷಣೆಯಾಗುವ ಸಾಧ್ಯತೆಯಿದೆ.ಪ್ಯಾಕೇಜ್, ನೆರವು ಬಗ್ಗೆ ಹಂತ ಹಂತವಾಗಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

 

 

 
 
 
 
 
 
 
 
 
 
 

Leave a Reply