Janardhan Kodavoor/ Team KaravaliXpress
27.6 C
Udupi
Tuesday, August 16, 2022
Sathyanatha Stores Brahmavara

ರಾಜ್ಯದಲ್ಲಿ ಇನ್ನು ಬಿರುಸಾಗಲಿದೆ ಮಳೆ

ಬೆಂಗಳೂರು: ರಾಜ್ಯದಲ್ಲಿ ಜೂನ್​ ತಿಂಗಳ ಆರಂಭದಲ್ಲಿ ಅಬ್ಬರಿಸಿ ಕೊಂಚ ವಿರಾಮ ಪಡೆದಿದ್ದ ಮಳೆ ಮತ್ತೆ ಜೋರಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಹಲವೆಡೆ ಉತ್ತಮವಾಗಿ ಮಳೆಯಾಗುತ್ತಿದ್ದು, ಮುಂದಿನ ಎರಡು ಮೂರು ದಿನ ಇದೇ ರೀತಿಯ ವಾತಾವರಣ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದಿನಿಂದ ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ. ಪಶ್ಚಿಮ ಮತ್ತು ಕೇಂದ್ರ ಪ್ರದೇಶದಲ್ಲಿ ಕಡಿಮೆ ಒತ್ತಡ ನಿರ್ಮಾಣವಾಗುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಮತ್ತು ಕೊಡಗಿನಲ್ಲಿ ಅಧಿಕ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ.ಜುಲೈ 12ರ ತನಕವೂ ಭಾರೀ ಮಳೆ ಮುಂದುವರೆಯುವ ಸಾಧ್ಯತೆ ಇರುವುದರಿಂದ ಕೊಡಗು ಭಾಗದಲ್ಲಿ ರೆಡ್​ ಆಲರ್ಟ್ ಘೋಷಣೆಯಾಗಿದೆ. 

ಕರ್ನಾಟಕ ಮಾತ್ರವಲ್ಲದೇ, ಮಹಾರಾಷ್ಟ್ರ, ಗೋವಾ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಕೇರಳ ರಾಜ್ಯಗಳ ಕೆಲ ಭಾಗಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ.ಒಟ್ಟಾರೆಯಾಗಿ ಸೆಪ್ಟೆಂಬರ್ ತನಕ ದೇಶದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!