Janardhan Kodavoor/ Team KaravaliXpress
30.6 C
Udupi
Tuesday, August 16, 2022
Sathyanatha Stores Brahmavara

ಕಾರ್ಯಕರ್ತರ ಮೇಲಿರುವ ಸುಳ್ಳು ಪ್ರಕರಣಗಳನ್ನು ತಕ್ಷಣ ವಾಪಾಸು ಪಡೆಯಬೇಕು : ಸಚಿವ ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು: ವಿಕಾಸ ಸೌಧದಲ್ಲಿ ಸೋಮವಾರ ಗೃಹ ಸಚಿವ ಆರಗ ಜ್ಞಾನೇಂದ್ರರನ್ನು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿಯಾಗಿ, ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಭಾರತೀಯ ಜನತಾ ಪಾರ್ಟಿ ಮತ್ತು ಹಿಂದೂ ಸಂಘಟನೆಗಳು ಕೊಟ್ಟಿದ್ದ ಮನವಿಯನ್ನು ಹಸ್ತಾಂತರಿಸಿದರು.

ರಾಜ್ಯದಲ್ಲಿ ಈ ಹಿಂದೆ ಅನ್ಯ ಸಂಘಟನೆಯ ಕಾರ್ಯಕರ್ತರ ಪ್ರಕರಣಗಳನ್ನು ಹಿಂದಿನ ಸರ್ಕಾರ ವಾಪಾಸು ಪಡೆದಿದ್ದು ಅದೇ ಸಂದರ್ಭದಲ್ಲಿ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರ ಕೇಸುಗಳು ಬಾಕಿ ಉಳಿದಿದೆ ಎಂದು ಕರಾವಳಿ ಭಾಗದ ಹಿಂದೂ ಸಂಘಟನೆಗಳು ಕೊಟ್ಟಿದ್ದ ಮನವಿಯನ್ನು ಉಲ್ಲೇಖಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯದಲ್ಲಿರುವ ಇಂತಹ ಪ್ರಕರಣಗಳನ್ನು ಕೂಡಲೇ ಮಾಹಿತಿ ಪಡೆದುಕೊಂಡು ಭಾರತೀಯ ಜನತಾ ಪಾರ್ಟಿ ಹಾಗೂ ಹಿಂದೂ ಕಾರ್ಯಕರ್ತರ ಮೇಲಿರುವ ಸುಳ್ಳು ಪ್ರಕರಣಗಳನ್ನು ತಕ್ಷಣ ವಾಪಾಸು ಪಡೆಯಬೇಕೆಂದು ಗೃಹ ಸಚಿವರಲ್ಲಿ ಮನವಿ ಮಾಡಿದರು.

ಮನವಿಗೆ ಸ್ಪಂದಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಈ ವಿಷಯಗಳನ್ನು ಕೂಡಲೇ ಗಮನಿಸಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಮಾಹಿತಿಯನ್ನು ಪಡೆದು ಸಚಿವ ಸಂಪುಟದಲ್ಲಿ ಮಂಡಿಸಿ ಸುಳ್ಳು ಕೇಸುಗಳನ್ನು ವಾಪಾಸು ಪಡೆಯುವ ಭರವಸೆ ನೀಡಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!