ವಿಧಾನ ಸೌಧದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರ ಸಭೆ  

ವಿಧಾನ ಸೌಧದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರಾದ ಶ್ರೀ ಉಮೇಶ್ ವಿ, ಕತ್ತಿ, ಮಾನ್ಯ ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಶ್ರೀ ಎಸ್. ಅಂಗಾರ, ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷರಾದ ಶ್ರೀ ಕಿರಣ್ ಕೊಡ್ಗಿ, ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್.

ಶ್ರೀ ಸಂಜೀವ ಮಠಂದೂರು ಮುಂತಾದ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರ ಸಮಕ್ಷಮ ನಡೆದ ಸಭೆಯಲ್ಲಿ ಮುಂದಿನ ಒಂದು ವಾರಗಳಲ್ಲಿ ಕರಾವಳಿ ಜಿಲ್ಲೆಯ ಅಕ್ಕಿ ಗಿರಣಿ ಮಾಲೀಕರು ಮತ್ತು ಆಹಾರ ನಿಗಮದ ಅಧಿಕಾರಿಗಳು ಮತ್ತು ಅವಳಿ ಜಿಲ್ಲೆಯ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಕುಚ್ಚಲಕ್ಕಿಯ ತಯಾರಿಕೆಗಾಗಿ ಭತ್ತದ ಖರೀದಿ, ಸಂಸ್ಕರಣೆ, ವಿತರಣೆ ಕುರಿತು ಸೂಕ್ತ ಮಾರ್ಗೋಪಾಯ ಕಂಡುಹಿಡಿಯಲು ಅಗತ್ಯ ಕ್ರಮಕೈಗೊಳ್ಳುವಂತೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಸಚಿವ ಶ್ರೀ ಉಮೇಶ್ ವಿ, ಕತ್ತಿಯವರು ಸೂಚಿಸಿದರು.

ಸಭೆಯಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಹಿರಿಯ ಅಧಿಕಾರಿಗಳು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಉಪ ನಿರ್ದೇಶಕರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply