20ಜಿಲ್ಲೆ(ಉಡುಪಿ ಸೇರಿ) ನಿರ್ಬಂಧ ಸಡಿಲಿಕೆ~11 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಕೆ

ಗುರುವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸುಮಾರು ಎರಡು ಗಂಟೆಗಳ ಕಾಲ ನಡೆದ ತಾಂತ್ರಿಕ ಸಲಹಾ ಸಮಿತಿಯ ಸಭೆಯಲ್ಲಿ ಕೆಲವೊಂದು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕರೆಯಲಾದ ಈ ಸಭೆಯಲ್ಲಿ ಮುಖ್ಯವಾಗಿ ನಿರ್ಬಂಧ ಸಡಿಲಿಕೆ ಮತ್ತು ಮಾರ್ಪಾಡುಗಳನ್ನು ಮಾಡುವ ವಿಚಾರಗಳ ಬಗ್ಗೆ ಸುದೀರ್ಘ ಚರ್ಚೆಗಳು ನಡೆಯಿತು.

ಸಭೆಯ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪಾಸಿಟಿವಿಟಿ ಪ್ರಮಾಣ ಹೆಚ್ಚಿರುವ 11 ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಈಗಾಗಲೇ ಇರುವಂತಹ ಲಾಕ್ ಡೌನ್ ಮುಂದುವರಿಯುತ್ತದೆ. ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲು ಆಯಾ ಜಿಲ್ಲಾಧಿಕಾರಿಗಳು ಮತ್ತು ಉಸ್ತುವಾರಿ ಸಚಿವರು ಪರಸ್ಪರ ಸಮಾಲೋಚಿಸಿ ಜಾರಿಗೆ ತರಬಹುದು ಎಂದು ಮುಖ್ಯಮಂತ್ರಿ ಹೇಳಿದರು.

ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಜೂನ್ 14ರ ಬೆಳಗ್ಗೆ 6ಗಂಟೆಯಿಂದ ಜೂನ್ 21ರ ಬೆಳಗ್ಗೆ 6 ಗಂಟೆಯವರೆಗೆ ಪರಿಷ್ಕೃತ ಮಾರ್ಗಸೂಚಿಗಳು ಜಾರಿಯಲ್ಲಿರುತ್ತದೆ. ಈ ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ಸ್ವಲ್ಪ ಮಟ್ಟಿಗೆ ಸಡಿಲಿಕೆ ಮಾಡಲಾಗಿದೆ.

ನಿರ್ಬಂಧ ಸಡಿಲಿಕೆ ಮಾಡಿದ ಜಿಲ್ಲೆಗಳಲ್ಲಿ ಇವುಗಳಿಗೆ ಅವಕಾಶ ನೀಡಲಾಗಿದೆ:

#ಕಾರ್ಖಾನೆಗಳಲ್ಲಿ ಶೇ. 50 ರಷ್ಟು ಸಿಬ್ಬಂದಿಗಳನ್ನು ಬಳಸಿ ಕಾರ್ಯನಿರ್ವಹಣೆಗೆ ಅವಕಾಶ ನೀಡಲಾಗಿದೆ.
#ತೀರಾ ಅಗತ್ಯವಿರುವ ಸರ್ಕಾರಿ ಕಛೇರಿಗಳಲ್ಲಿ ಶೇ. 50 ರಷ್ಟು ಸಿಬ್ಬಂದಿಗಳಿಗೆ ಮಾತ್ರ ಅವಕಾಶ.
#ಗಾರ್ಮೆಂಟ್ಸ್ ಗಳಲ್ಲಿ ಶೇ. 30 ರಷ್ಟು ಸಿಬ್ಬಂದಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
#ಅಗತ್ಯ ವಸ್ತುಗಳ ಅಂಗಡಿಗಳಾದ ದಿನಸಿ, ಬೇಕರಿ ಇತ್ಯಾದಿಗಳನ್ನು ಮಧ್ಯಾಹ್ನ 2 ಗಂಟೆಯವರೆಗೆ #ಕಾರ್ಯನಿರ್ವಹಿಸಲು ಅವಕಾಶ. ನಿರ್ಮಾಣ ಕಾಮಗಾರಿಗಳಿಗೆ ಅನುಮತಿ ನೀಡಲಾಗಿದೆ.

#ನಿರ್ಮಾಣ ಕಾಮಗಾರಿ ಸಾಮಗ್ರಿಗಳನ್ನು ಪೂರೈಸುವ ಸಿಮೆಂಟ್, ಸ್ಟೀಲ್ ಅಂಗಡಿಗಳಿಗೆ ತೆರೆಯಲು ಅನುಮತಿ. #ಉದ್ಯಾನವನಗಳಲ್ಲಿ ಮುಂಜಾನೆ 5 ಗಂಟೆಯಿಂದ ಬೆಳಗ್ಗೆ 10ಗಂಟೆಯವರೆಗೆ ಮಾತ್ರ #ವಾಯುವಿಹಾರಕ್ಕೆ ಅವಕಾಶ. #ಬೀದಿ ಬದಿ ವ್ಯಾಪಾರಸ್ಥರಿಗೆ ಮುಂಜಾನೆ 6ರಿಂದ ಮಧ್ಯಾಹ್ನ 2ಗಂಟೆಯವರೆಗೆ ಮಾತ್ರ ಅವಕಾಶ. #ಆಟೋ, ಟ್ಯಾಕ್ಸಿಯಲ್ಲಿ ಕೇವಲ ಇಬ್ಬರು ಪ್ರಯಾಣಿಕರಿಗೆ ಮಾತ್ರ ಅವಕಾಶ.
#ಹೊಟೇಲುಗಳಲ್ಲಿ, ಬಾರ್ ಆಂಡ್ ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ಮಾತ್ರ.
#ಕೋವಿಡ್ ಕರ್ಫ್ಯೂ: ನಿರ್ಬಂಧ ಸಡಿಲಿಕೆ ಮಾಡಿರುವ ಜಿಲ್ಲೆಗಳಲ್ಲಿ ಪ್ರತಿದಿನ ರಾತ್ರಿ 7 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕೊರೊನಾ ಕರ್ಫ್ಯೂ ಜಾರಿಯಲ್ಲಿರುತ್ತದೆ.
#ವಾರಾಂತ್ಯದ ಕರ್ಫ್ಯೂ: ನಿರ್ಬಂಧ ಸಡಿಲಿಕೆ ಮಾಡಿರುವ ಜಿಲ್ಲೆಗಳಲ್ಲಿ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಕೊರೊನಾ ಕರ್ಫ್ಯೂ ಜಾರಿಯಲ್ಲಿರುತ್ತದೆ.

 
 
 
 
 
 
 
 
 

Leave a Reply