ರಾಜ್ಯದಲ್ಲಿ ಮೇ.24ರಿಂದ ಮತ್ತೆ 14 ದಿನ ಲಾಕ್‍ಡೌನ್ – ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮೇ.24ರಿಂದ ಮತ್ತೆ 14 ದಿನ ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಾದ್ಯಂತ ಲಾಕ್ ಡೌನ್ ವಿಸ್ತರಿಸಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊರೋನಾ ನಿಯಂತ್ರಣಕ್ಕಾಗಿ ಕಠಿಣ ನಿಯಮ ಜಾರಿಗೊಳಿಸಲಾಗುತ್ತದೆ. ಮೇ.24ರಿಂದ ಮತ್ತೆ 14 ದಿನ ಲಾಕ್ ಡೌನ್ ವಿಸ್ತರಣೆ ಮಾಡಲಾಗುತ್ತದೆ. ಜೂನ್ ತಿಂಗಳ 7ನೇ ತಾರೀಖಿನವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಬೆಳಿಗ್ಗೆ 6 ರಿಂದ 9.45ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಹಿಂದಿನ ಮಾರ್ಗಸೂಚಿ ಕ್ರಮಗಳನ್ನು ಮುಂದುವರೆಸಲಾಗಿದೆ. ಬೆಂಗಳೂರಿನಲ್ಲಿ ಕಠಿಣ ಲಾಕ್ ಡೌನ್ ಜಾರಿಗೆ ಸೂಚಿಸಲಾಗಿದ್ದು, ಇನ್ನು ಮುಂದೆ ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದರು.

 

 

 

 

 
 
 
 
 
 
 
 
 
 
 

Leave a Reply