ಮನೆಯಿಂದ ಕ್ರಿಕೆಟ್ ಆಡಲು ತೆರಳಿದ್ದ ಯುವಕ ನಾಪತ್ತೆ

ಬಂಟ್ವಾಳ: ಕ್ರಿಕೆಟ್ ಆಡಲು ಹೋಗಿದ್ದ ಯುವಕನೋರ್ವ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಿ.ಮೂಡ ಗ್ರಾಮದ ತಾಳಿಪಡ್ಡು ನಿವಾಸಿ ಮುಹಮ್ಮದ್ ಫಾರೂಕ್ ನಾಪತ್ತೆಯಾದ ಯುವಕ ಎಂದು ತಿಳಿದುಬಂದಿದೆ.

ನ.28ರ ಮಂಗಳವಾರದಂದು ಬೆಳಗ್ಗೆ 7:30ಕ್ಕೆ ಕ್ರಿಕೆಟ್ ಆಡಲೆಂದು ಮನೆಯಿಂದ ಹೋದವನು, ಬಳಿಕ ಮನೆಗೆ ವಾಪಸ್ ಬಂದಿಲ್ಲ. ಮನೆಯಿಂದ ಹೋದ ಬಳಿಕ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು, ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಆತನ ಪತ್ನಿ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

 
 
 
 
 
 
 
 
 
 
 

Leave a Reply