ಮೈಸೂರಿನ ನಾಡದೇವತೆಯಲ್ಲಿಗೆ ನಾಡ ದೊರೆ

ಮೈಸೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಾಡಶಕ್ತಿ ದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಸಿಎಂ ಆದ ಬಳಿಕ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಬಸವರಾಜ ಬೊಮ್ಮಾಯಿಗೆ ಶಾಸಕ ಜಿ.ಟಿ.ದೇವೇಗೌಡರು ಬೃಹತ್ ಮಲ್ಲಿಗೆ ಹಾರವನ್ನು ಹಾಕಿ ಸ್ವಾಗತಿಸಿದರು.ಬಳಿಕ ದೇವಸ್ಥಾನದ ಆಡಳಿತದಿಂದ ಪೂರ್ಣ ಕುಂಭ ಸ್ವಾಗತ ನೀಡಿ, ಬರಮಾಡಿಕೊಳ್ಳಲಾಯಿತು.

ಚಾಮುಂಡೇಶ್ವರಿ ಗೆ ವಿಶೇಷ ಪೂಜೆಯನ್ನು ಸಲ್ಲಿಸಿದ ಸಿಎಂ ನಾಡಿನ ಜನರನ್ನು ಕೊರೋನಾದಿಂದ ಕಾಪಾಡು, ಕೊರೋನಾದಿಂದ ನಾಡನ್ನು ಮುಕ್ತಗೊಳಿಸು, ಎಲ್ಲರಿಗೂ ಒಳಿತು ಮಾಡು. ಸುಖ, ಶಾಂತಿ, ನೆಮ್ಮದಿಯನ್ನು ನೀಡು ತಾಯಿ ಎಂದು ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸಿದರು. 

ಸಿಎಂ ಗೆ ಸಚಿವ ಮುರುಗೇಶ್ ನಿರಾಣಿ, ಎಸ್.ಟಿ.ಸೋಮಶೇಖರ್, ನಾರಾಯಣಗೌಡ, ಡಾ.ಕೆ.ಸುಧಾಕರ್, ಭೈರತಿ ಬಸವರಾಜು, ಮುನಿರತ್ನ, ಗೋಪಾಲಯ್ಯ ಸಾಥ್ ನೀಡಿದರು. ಸಿಎಂ, ಸಚಿವರು ಚಾಮುಂಡೇಶ್ವರಿಯ ದರ್ಶನ ಪಡೆದು ಅಲ್ಲಿಂದ ನಿರ್ಗಮಿಸುವ ತನಕ ಭಕ್ತರಿಗೆ ದೇವಸ್ಥಾನದ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಇದರಿಂದಾಗಿ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ಚಾಮುಂಡೇಶ್ವರಿಯ ದರ್ಶನ ಕ್ಕೆಂದು ಕಾದು ನಿಂತಿದ್ದ ಭಕ್ತರು ಪರದಾಡಬೇಕಾಯಿತು. ಸಿಎಂ ಭೇಟಿಯ ಹಿನ್ನೆಲೆಯಲ್ಲಿ ಬೆಟ್ಟದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

 
 
 
 
 
 
 
 
 
 
 

Leave a Reply