ಮೈಸೂರು ದಸರವನ್ನು ಸರಳವಾಗಿ ಆಚರಿಸಲು ಚಿಂತನೆ – ಸಚಿವ ಎಸ್.ಟಿ ಸೋಮಶೇಖರ್

ಮೈಸೂರು: ಕಳೆದ ವರ್ಷದಂತೆ ಈ ಬಾರಿಯೂ ಮೈಸೂರು ದಸರವನ್ನು ಸರಳವಾಗಿ ಆಚರಿಸಲು ಚಿಂತನೆ ನಡೆದಿದೆ. ಕೊರೊನಾ ಮೂರನೇ ಅಲೆ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಪಡೆದು ಆಚರಣೆ ಬಗ್ಗೆ ತೀರ್ಮಾನಿಸಲಾಗುವುದು ಎಂದು ಸಚಿವ ಎಸ್.ಟಿ ಸೋಮಶೇಖರ್ ಹೇಳಿದ್ದಾರೆ.

ಹೆಚ್.ಟಿ.ಕೋಟೆ ತಾಲ್ಲೂಕು ಬಾವಲಿ ಚೆಕ್‌ಪೋಸ್ಟ್‌ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಳ ದಸರಾ ಆಚರಣೆಗೆ ರೂಪರೇಷೆಗಳನ್ನು ಸಿದ್ದಪಡಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ರೂಪರೇಷೆ ಸಿದ್ಧವಾದ ನಂತರ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

 
 
 
 
 
 
 
 
 
 
 

Leave a Reply