ಡಾ|| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಡಾ.ರಮೇಶ್ ಅರವಿಂದ್ ಅವರು ಆಯ್ಕೆ

ಕೋಟತಟ್ಟು ಗ್ರಾಮ ಪಂಚಾಯತ್ , ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.)ಕೋಟದ ಸಹಭಾಗಿತ್ವದಲ್ಲಿ ಕಳೆದ ಹದಿನೇಳು ವರುಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರ ನೀಡುತ್ತಾ ಬಂದಿದೆ.

ಈಗಾಗಲೇ ಶ್ರೀಯುತರಾದ ಶ್ರೀ ವೀರಪ್ಪ ಮೊಯ್ಲಿ, ಶ್ರೀ ವೆಂಕಟಾಚಲ, ಶ್ರೀ ಕೆ.ರಾಮಕೃಷ್ಣ ಹಂದೆ, ಶ್ರೀ ರವಿ ಬೆಳಗೆರೆ, ಶ್ರೀ ಗಿರೀಶ ಕಾಸರವಳ್ಳಿ, ಶ್ರೀಮತಿ ಜಯಶ್ರೀ, ಶ್ರೀ ಮೋಹನ ಆಳ್ವ, ಶ್ರೀಮತಿ ಸಾಲು ಮರದ ತಿಮ್ಮಕ್ಕ, ಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ, ಶ್ರೀ ಜಯಂತ ಕಾಯ್ಕಿಣಿ, ಶ್ರೀ ಸದಾನಂದ ಸುವರ್ಣ, ಡಾ | ಬಿ. ಎಂ ಹೆಗ್ಡೆ, ಶ್ರೀಪ್ರಕಾಶ್ ರೈ, ಶ್ರೀಪಡ್ರೆ, ಶ್ರೀಮತಿ ಕವಿತಾ ಮಿಶ್ರ, ನಾಡೋಜ ಡಾ.ಎಸ್.ಎಲ್.ಭೈರಪ್ಪ , ಶ್ರೀ ಗಿರೀಶ್ ಭಾರದ್ವಜ್ ಅವರಿಗೆ ಪ್ರದಾನ ಮಾಡಲಾಗಿರುತ್ತದೆ.

         ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ೨೦೨೨ರ ಸಾಲಿನಲ್ಲಿ ಹಲವು ದಶಕಗಳಿಂದ ಚಲನಚಿತ್ರ ಹಾಗೂ ಸಾಮಾಜಿಕ ಮಾಧ್ಯಮ ಕ್ಷೇತ್ರದಲ್ಲಿ ನಟ, ನಿರ್ದೇಶಕ, ನಿರೂಪಕ, ವ್ಯಕ್ತಿತ್ವ ವಿಕಸನ ಸಂಪನ್ಮೂಲ ವ್ಯಕ್ತಿಯಾಗಿ ರಾಷ್ಟç ಮಟ್ಟದಲ್ಲಿ ಸಾಧನೆಗೈದು ಕೀರ್ತಿ ಗಳಿಸಿದ ಡಾ.ರಮೇಶ್ ಅರವಿಂದ್ ಅವರ ಸರಳ, ಸವ್ಯಸಾಚಿ ವ್ಯಕ್ತಿತ್ವ , ಸಾಧನೆ ಪರಿಗಣಿಸಿ ಈ ವರ್ಷ ಅವರನ್ನು ಡಾ|| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ

ಅಕ್ಟೋಬರ್ ಹತ್ತರಂದು ಡಾ. ಕೋಟ ಶಿವರಾಮ ಕಾರಂತರ ಜನ್ಮ ದಿನ ಡಾ. ಕಾರಂತ ಹುಟ್ಟೂರ ಪ್ರಶಸ್ತಿಯನ್ನು ಇವರಿಗೆ ಪ್ರದಾನ ಮಾಡಲಾಗುತ್ತದೆ ಎಂದು ಡಾ|| ಶಿವರಾಮ ಕಾರಂತ ಪ್ರತಿಷ್ಠಾನ (ರಿ)ಕೋಟದ ಕಾರ್ಯಾಧ್ಯಕ್ಷ ಶ್ರೀ ಆನಂದ ಸಿ ಕುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

             ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅಶ್ವಿನಿ ದಿನೇಶ್, ಆಯ್ಕೆ ಸಮಿತಿ ಸದಸ್ಯ ಶ್ರೀ ಯು.ಎಸ್ ಶೆಣೈ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಶ್ರೀಮತಿ ಪೂರ್ಣಿಮಾ, ಕೋಟತಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀ ವಾಸು ಪೂಜಾರಿ, ಪಿ.ಡಿ.ಓ ಶ್ರೀ ಜಯರಾಮ್ ಶೆಟ್ಟಿ, ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಶ್ರೀ ನರೇಂದ್ರ ಕುಮಾರ್ ಕೋಟ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply