ಮಹಾರಾಷ್ಟ್ರ-ಕೇರಳದಿಂದ ರಾಜ್ಯಕ್ಕೆ ಬರುವವರಿಗೆ `RTPCR’ ವರದಿ ಕಡ್ಡಾಯ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಬೆನ್ನಲ್ಲೇ ಆತಂಕ ಸೃಷ್ಟಿಸಿರುವ ಡೆಲ್ಟಾಪ್ಲಸ್ ಸೋಂಕಿನ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಹಾಗೂ ಕೇರಳದಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರಿಗೆ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ ಎಂದು ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.

ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದಲ್ಲಿ ಇಬ್ಬರಲ್ಲಿ ಡೆಲ್ಟಾ ಪ್ಲಸ್ ಸೋಂಕು ದೃಢಪಟ್ಟಿದ್ದು, 600 ಕ್ಕೂ ಹೆಚ್ಚು ಸ್ಯಾಂಪಲ್ಸ್ ಗಳನ್ನು ಜಿನೋಮಿಕ್ ಸ್ವೀಕ್ಸಿಂಗ್ ಟೆಸ್ಟ್ ಗೆ ಕಳುಹಿಸಲಾಗಿದೆ.ಅದರ ವರದಿ ಇಂದು ಬರಲಿದೆ ಎಂದು ತಿಳಿಸಿದ್ದಾರೆ.ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ಸೋಂಕಿನ ಪ್ರಕರಣಗಳು ಹೆಚ್ಚು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮತ್ತು ಕೇರಳ ಗಡಿ ಭಾಗದಲ್ಲಿ ಹೆಚ್ಚಿನ ನಿಗಾ ಇಡಲಾಗಿದೆ. ಅಲ್ಲಿನ ಜಿಲ್ಲಾಡಳಿತಕ್ಕೂ ಸೂಚನೆ ನೀಡಲಾಗಿದೆ ಎಂದಿದ್ದಾರೆ.

ಎರಡು ಡೋಸ್ ಲಸಿಕೆ ಪೂರ್ಣವಾಗುವವರೆಗೆ ಜನರು ಬಹಳ ಎಚ್ಚರಿಕೆಯಿಂದ ಇರಬೇಕು. ಮಾಸ್ಕ್ ಧರಿಸುವುದು, ದೈಹಿಕ ಅಂತರ ಕಾಪಾಡಿಕೊಳ್ಳುವುದು ಅವಶ್ಯಕ ಎಂದು ಸಲಹೆ ನೀಡಿದ್ದಾರೆ.

 
 
 
 
 
 
 
 
 

Leave a Reply