ಅಮ್ಮಾ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ, ನನ್ನನ್ನು ಕ್ಷಮಿಸು’ ಎಂದು ಮೆಸೇಜ್‌ ಕಳುಹಿಸಿ ಬಾಲಕಿ ಆತ್ಮಹತ್ಯೆ

ಹಾಸನ : ಅಮ್ಮಾ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ, ನನ್ನನ್ನು ಕ್ಷಮಿಸು’ ಎಂದು ತಾಯಿಗೆ ಮೊಬೈಲ್‌ನಲ್ಲಿ ಮೆಸೇಜ್‌ ಕಳುಹಿಸಿ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ.

ಪೂರ್ವಿಕಾ ಎಂಬ 15 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಾಯಿಗೆ ಮೆಸೇಜ್‌ ಮಾಡಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆಗೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಹಾಸನದ ಹಾಸನದ ಖಾಸಗಿ ಶಾಲೆಯಲ್ಲಿ ಬಾಲಕಿ ಒಂಬತ್ತನೇ ತರಗತಿ ಓದುತ್ತಿದ್ದಳು.

ಮೆಸೇಜ್ ನೋಡಿದ ತಾಯಿ ಕೂಡಲೇ ದಿಗಿಲುಗೊಂಡು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಆದರೆ ಅವರು ಬರುವಷ್ಟರಲ್ಲಿಯೇ ಪೂರ್ವಿಕಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದಿಂದ ಬಾಲಕಿ ಶವಕ್ಕಾಗಿ ಶೋಧಕಾರ್ಯ ನಡೆದಿದೆ.

ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ, ಆತ್ಮಹತ್ಯೆಗೆ ಏನು ಕಾರಣ ಎಂಬ ಬ‌ಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ.

 
 
 
 
 
 
 
 
 
 
 

Leave a Reply