ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಪೋಸ್ಟ್‌: ಪೊಲೀಸ್‌ ಕಾನ್ಸಟೇಬಲ್ ಸಸ್ಪೆಂಡ್‌!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಪೋಸ್ಟ್‌ ಮಾಡಿದ್ದ ಪೊಲೀಸ್ ಕಾನ್ಸ್‌ಟೇಬಲ್‌ನನ್ನು ಅಮಾನತು ಮಾಡಲಾಗಿದೆ. ಹೌದು, ವಿಜಯಪುರ ಗ್ರಾಮಾಂತರ ಠಾಣೆ ಕಾನ್ಸಟೇಬಲ್ ರಾಜಶೇಖರ ಖಾನಾಪುರರನ್ನ ಅಮಾನತು ಮಾಡಿ ವಿಜಯಪುರ ಎಸ್‌ಪಿ ಎಚ್.ಡಿ. ಆನಂದಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. 

ಪೊಲೀಸರನ್ನು ಬೈಯುವ ನೀನು ಪೊಲೀಸ್ ಎಸ್ಕಾರ್ಟ್ ಇಲ್ಲದೆ ಮನೆಗೆ ಹೋಗು ಅಂತ ಠಾಣೆ ಕಾನ್ಸಟೇಬಲ್ ರಾಜಶೇಖರ ಖಾನಾಪುರ ಪೋಸ್ಟ್ ಮಾಡಿದ್ದರು. ಇದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. 

ಹೀಗಾಗಿ ಪೇದೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿದ್ದರಾಮಯ್ಯ ಅಭಿಮಾನಿಗಳು ಆಗ್ರಹಿಸಿದ್ದರು.  

Leave a Reply