ಮಹಿಳಾ ಪೊಲೀಸ್ ಸಿಬ್ಬಂದಿಗಳಿಂದ ರಾತ್ರಿ ಕರ್ತವ್ಯ ನಿರ್ವಹಣೆ!

ಶಿರಸಿ ನಗರದಲ್ಲಿ ಕಳೆದ ರಾತ್ರಿಯಿಂದ ಮಹಿಳಾ ಪೊಲೀಸ್ ಸಿಬ್ಬಂದಿಗಳು ರಾತ್ರಿ ಗಸ್ತು ಪಡೆ ಕರ್ತವ್ಯ ನಿರ್ವಹಿಸಿದ್ದಾರೆ. ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ ಐದು ಗಂಟೆಯವರೆಗೆ ಅನುಮಾನಸ್ಪದ ವಾಹನಗಳ ತಪಾಸಣೆ ನಡೆಸಿ ಕರ್ತವ್ಯ ನಿರ್ವಹಿಸಿದ್ದು, ಸಾರ್ವಜನಿಕರ ಶ್ಲಾಘನೆಗೆ ಕಾರಣವಾಗಿದ್ದಾರೆ.

ಈ ಸಂದರ್ಭದಲ್ಲಿ ಡಿಎಸ್ಪಿ ರವಿ ನಾಯ್ಕ, ವೃತ್ತ ನಿರೀಕ್ಷಕ ರಾಮು ನಾಯಕ್ ಮಾರ್ಗದರ್ಶನದಲ್ಲಿ ನಗರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಪಿಎಸ್ಐ ಕುಮಾರಿ ರತ್ನ ಕುರಿ ಇವರ ನೇತೃತ್ವದಲ್ಲಿ ನಗರ ಠಾಣೆಯ ಮಹಿಳಾ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಿದ್ದಾರೆ .

 
 
 
 
 
 
 
 
 
 
 

Leave a Reply