ಶಾಸಕಿ ಸೌಮ್ಯ ರೆಡ್ಡಿ ವಿರುದ್ಧ ಎಫ್.ಐ.ಆರ್ ದಾಖಲು

 ಕರ್ತವ್ಯನಿರತ ಮಹಿಳಾ ಪೊಲೀಸ್ ಪೇದೆ ಮೇಲೆ ದಬ್ಬಾಳಿಕೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಕಾಂಗ್ರೆಸ್​ ನಾಯಕರು ಪ್ರತಿಭಟನೆ ನಿರತರಾಗಿದ್ದರು. ಈ ಸಂದರ್ಭದ ಸ್ಥಳದಲ್ಲಿದ್ದ ಸೌಮ್ಯಾ ರೆಡ್ಡಿಯವರನ್ನು ಮಹಿಳಾ ಪೊಲೀಸರು ವಶಕ್ಕೆ ಪಡೆಯಲು ಯತ್ನಿಸಿದಾಗ, ಸೌಮ್ಯಾ ರೆಡ್ಡಿ ಮಹಿಳಾ ಪೇದೆಯೊಬ್ಬರಿಗೆ ಹೂ ದಿ ಹೆಲ್ ಆರ್ ಯು ಎಂದು ನಿಂದಿಸಿ, ಆಕೆಯ ಮೇಲೆ ಹಲ್ಲೆ ಮಾಡಿದ್ದರು, ಎಂದು ದೂರಿನಲ್ಲಿ ಆರೋಪ ಮಾಡಲಾಗಿದೆ. ಮಹಿಳಾ ಪೇದೆಯ ಕೆನ್ನೆಗೆ ಈಕೆ ಬಾರಿಸಿದ್ದು ಸಾರ್ವಜನಿಕವಾಗಿ ಭಾರಿ ವಿರೋಧ ವ್ಯಕ್ತವಾಗಿತ್ತು. ಇದೀಗ ಐಪಿಎಸಿ ಸೆಕ್ಷನ್ 323, 353ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

 

 
 
 
 
 
 
 
 
 

Leave a Reply