ಇಂದು 10ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟ

ಸೋಮವಾರ (ಮೇ 8) ರಾಜ್ಯದ 8 ಲಕ್ಷ ಮಂದಿ ಎಸ್ಎಸ್ಎಲ್‍ಸಿ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಇಂದು ಬೆಳಗ್ಗೆ 10ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಸಿದ್ಧತೆ ನಡೆಸಿದೆ.

ಈ ಸಂಬಂಧ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಮಹತ್ವದ ಸುದ್ದಿಗೋಷ್ಠಿ ಕರೆದಿದೆ. ಬಳಿಕ ಬೆಳಗ್ಗೆ 11 ಗಂಟೆಗೆ ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಅಧಿಕೃತ ವೆಬ್ಸೈಟ್ https://karresults.nic.in/ ಹಾಗೂ https://kseab.karnataka.gov.in/ ಈ ವೆಬ್ಸೈಟ್ ನಲ್ಲಿ 2022-23ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಪಡೆಯಬಹುದಾಗಿದೆ.

ಮಾರ್ಚ್ 31ರಿಂದ ಏಪ್ರಿಲ್ 15ರ ವರೆಗೆ 2022-23ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ನಡೆಸಲಾಗಿತ್ತು. ಏಪ್ರಿಲ್ 21ರಿಂದ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಯನ್ನು ನಡೆಸಲಾಗಿತ್ತು. ಮೇ 10ರಂದು ರಾಜ್ಯ ವಿಧಾನಸಭೆ ಚುನಾವಣೆಯೂ ಇರೋದ್ರಿಂದ ಎರಡು ದಿನ ಮುಂಚಿತವಾಗಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಲಿದೆ.

 
 
 
 
 
 
 
 
 
 
 

Leave a Reply