ರಾಜ್ಯದಲ್ಲಿ ಕೊರೊನಾ ಹರಡುವಿಕೆ ಪ್ರಮಾಣ ಗಣನೀಯ ಇಳಿಕೆ ಕಂಡಿದೆ: ಸಚಿವ ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವಿಕೆ ಪ್ರಮಾಣ ಗಣನೀಯ ಇಳಿಕೆಯಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು,ಕಳೆದ 24 ಗಂಟೆಯಲ್ಲಿ ರಾಜ್ಯದ 1,58,274 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.ಇವರಲ್ಲಿ 12,209 ಮಂದಿಗೆ ಸೋಂಕು ದೃಢಪಟ್ಟಿದೆ.ಈ ಮೂಲಕ ಸೋಂಕು ಹರಡುವಿಕೆ ಪ್ರಮಾಣ 7.71% ನಷ್ಟಿದೆ.ಇಂದು ಬೆಂಗಳೂರಿನಲ್ಲಿ 10,224 ಜನ ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 25,659 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಗುಣಮುಖರಾದ ಸೋಂಕಿತರ ಸಂಖ್ಯೆ 24,09,417ಕ್ಕೆ ಏರಿಕೆಯಾಗಿದೆ ಎಂಬ ಮಾಹಿತಿ ನೀಡಿದ್ದಾರೆ.

 
 
 
 
 
 
 
 
 
 
 

Leave a Reply