ಲಾಕ್ ಡೌನ್ ಮುಂದುವರಿಸುವ ಸೂಚನೆ ಕೊಟ್ಟರೆ ಸಚಿವ ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೆ ಬಂದು ನಾಲ್ಕು ದಿನಗಳಷ್ಟೇ ಆಗಿದ್ದು, ಇದರ ಪರಿಣಾಮ ತಕ್ಷಣಕ್ಕೆ ಗೊತ್ತಾಗುವುದಿಲ್ಲ. ಮಹಾರಾಷ್ಟ್ರದಲ್ಲಿ 44 ದಿನಗಳಿಂದ ಲಾಕ್ ಡೌನ್ ಜಾರಿಯಲ್ಲಿದ್ದು, ಈಗಷ್ಟೇ ಮುಂಬೈನಲ್ಲಿ ಕೊರೋನಾ ನಿಯಂತ್ರಣಕ್ಕೆ ಬರುತ್ತಿದೆ. ಹಾಗಾಗಿ ಲಾಕ್ ಡೌನ್ ಅನಿವಾರ್ಯ. ಆಗಲೂ ನಿಯಂತ್ರಣಕ್ಕೆ ಬರದಿದ್ದರೆ ಕಠಿಣ ನಿಯಮ ಅನಿವಾರ್ಯವಾಗಲಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

 ನಗರದ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊರೊನಾ ನಿಖರ ತಪಾಸಣೆಗಾಗಿ ತಜ್ಞರ ತಂಡ ಸಿಟಿ ಸ್ಕ್ಯಾನ್ ಮಾಡಲು ಸಲಹೆ ನೀಡಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಅಧಿಕ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿವೆ. ಇಂದು ನಿಗದಿತ ದರಗಳನ್ನು ಮಾತ್ರ ಪಡೆಯುವಂತೆ ಆದೇಶ ಹೊರಡಿಸಲಾಗುವುದು. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಸ್ಕ್ಯಾನಿಂಗ್ ಮಾಡಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳು ಅಧಿಕ ಶುಲ್ಕ ಪಡೆಯುವಂತಿಲ್ಲ ಎಂದರು.

ರಾಜ್ಯದಲ್ಲಿ 2 ಕೋಟಿ ಲಸಿಕೆಗಳನ್ನು ಪಡೆಯಲು ಉದ್ದೇಶಿಸಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಟಲ್ ಬಿಹಾರಿ ವಾಜಪೇಯಿ ಆಸ್ಪತ್ರೆಯಲ್ಲಿ ಲಸಿಕೆಗೆ ಚಾಲನೆ ನೀಡಲಿದ್ದಾರೆ. ಸಾರ್ವತ್ರಿಕ ಲಸಿಕೆ ಯಾವಾಗಿನಿಂದ ಆರಂಭವಾಗಲಿದೆ ಎಂಬುದು ಕಂಪನಿಗಳ ಉತ್ಪಾದನೆ ನೋಡಿಕೊಂಡು ತಿಳಿಸಲಾಗುತ್ತದೆ ಎಂದರು.ಪ್ರಸ್ತುತ ಆರು ಸಾವಿರ ಲಸಿಕಾ ಕೇಂದ್ರಗಳಿದ್ದು, ಅವುಗಳಿಗೆ 3 ಲಕ್ಷ ಲಸಿಕೆ ಅಗತ್ಯವಿದೆ. ಆದರೆ, ಸಾರ್ವತ್ರಿಕ ಲಸಿಕೆ ಆರಂಭವಾದಾಗ ನಿತ್ಯ ಆರು ಲಕ್ಷ ಲಸಿಕೆಯಾದರೂ ಬೇಕಾಗುತ್ತದೆ ಎಂದು ತಿಳಿಸಿದರು.

 

 

 

 
 
 
 
 
 
 
 
 
 
 

Leave a Reply