“ನಿನ್ನಾಸೆಗೆಲ್ಲಿ ಕೊನೆಯಿದೆ” ಸಂಸದನ ಹಾಡಿನ ಝಲಕ್ 

ಬೆಂಗಳೂರು : ದಕ್ಷಿಣ ಲೋಕಸಭಾ ಕ್ಷೇತ್ರದ ಯುವ ಸಂಸದ ತೇಜಸ್ವಿ ಸೂರ್ಯ ಅಣ್ಣಾವ್ರ ಹಾಡನ್ನು ಹಾಡುವ ಮೂಲಕ ಗಮನ ಸೆಳೆದಿದ್ದಾರೆ. ಮೊದಲ ಬಾರಿಗೆ ಲೋಕಸಭಾ ಸದಸ್ಯರಾಗಿದ್ರೂ ತಮ್ಮ ಕಾರ್ಯವೈಖರಿ ಮೂಲಕ ಎಲ್ಲರ ಮೆಚ್ಚುಗೆ ಪಡೆದಿದ್ದರು. ಇದೀಗ ಹಾಡುವ ಮೂಲಕ ಎಲ್ಲರನ್ನೂ ನಿಬ್ಬೆರಗಾಗಿಸಿದ್ದಾರೆ.ದಕ್ಷಿಣ ಲೋಕಸಭಾ ಕ್ಷೇತ್ರ ಸಂಸದ ತೇಜಸ್ವಿ ಸೂರ್ಯ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರೊಂದಿಗೆ ಬೆಂಗಳೂರು ಗಣೇಶೋತ್ಸವದಲ್ಲಿ ಪದ್ಮಭೂಷಣ ಡಾ.ರಾಜ್ ಕುಮಾರ್ ಹಾಡಿರುವ ಬಾನಿಗೊಂದು ಎಲ್ಲೆ ಎಲ್ಲಿದೆ. ನಿನ್ನಾಸೆಗೆಂದು ಕೊನೆಯಿದೆ.. ಅಂತಾ ಹಾಡುತ್ತಿದ್ರೆ ನೆರೆದಿದ್ದ ಪ್ರೇಕ್ಷಕರು ಮೂಕವಿಸ್ಮಿತರಾಗಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ವಿಜಯ ಪ್ರಕಾಶ್ ಅವರ ಜೊತೆಗೆ ಹಾಡಿರುವ ಹಾಡನ್ನು ತಮ್ಮ ಟ್ವೀಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ

Leave a Reply