ರಾಜ್ಯದಲ್ಲಿ ಅನ್ ಲಾಕ್ ನಿಂದ ಕೊರೊನಾ ಸೋಂಕು ಹೆಚ್ಚಳವಾದ್ರೆ ಕಠಿಣ ಕ್ರಮ : ಸಚಿವ ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ಸೋಮವಾರದಿಂದ ಕೆಲ ಜಿಲ್ಲೆಗಳನ್ನು ಅನ್ ಲಾಕ್ ಮಾಡಿದ್ದು, ಅನ್ ಲಾಕ್ ನಿಂದ ಕೊರೊನಾ ಸೋಂಕು ಹೆಚ್ಚಳವಾದರೆ ಮತ್ತೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ​ಎಚ್ಚರಿಸಿದ್ದಾರೆ 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರದಿಂದ ಕೆಲ ಜಿಲ್ಲೆಗಳು ಹಾಗೂ ಕೆಲ ವಲಯಗಳಿಗೆ ಅನ್ ಲಾಕ್ ಘೋಷಣೆ ಮಾಡಲಾಗಿದೆ. ಅನ್ ಲಾಕ್ ಮಾಡಿದರು ಜನರು ಎಚ್ಚರಿಕೆಯಿಂದ ಇರಬೇಕು. ಎರಡು ಡೋಸ್ ಲಸಿಕೆ ಪಡೆಯೋವರೆಗೂ ಜನ ಎಚ್ಚರವಾಗಿ ಇರಬೇಕು. ರಾಜ್ಯದಲ್ಲಿ ಕನಿಷ್ಠ ಶೇ. 70 ಜನರಿಗೆ ಲಸಿಕೆ ಕಂಪ್ಲೀಟ್ ಆದ ಮೇಲೆ ನಾವು ಮೊದಲಿನಂತೆ ಆರಾಮವಾಗಿ ಇರಬಹುದು ಎಂದು ಹೇಳಿದ್ದಾರೆ.

ಶೇ. 10 ಕ್ಕಿಂತ ಹೆಚ್ಚು ಸೋಂಕು ಇರೋ ಜಿಲ್ಲೆಗಳು ಎಚ್ಚರ ತಪ್ಪಬಾರದು. ಹೆಚ್ಚು ಹೆಚ್ಚು ಟೆಸ್ಟ್ ಗಳನ್ನು ಮಾಡಲು ಕ್ರಮವಹಿಸಬೇಕು. ಅಂತರ್ ​ರಾಜ್ಯ  ಹೊರದೇಶದಿಂದ ಬರುವವರಿಗೆ ಚೆಕ್ ಪಾಯಿಂಟ್ ಗಳಲ್ಲಿ ಕಡ್ಡಾಯವಾಗಿ ಟೆಸ್ಟ್ ಮಾಡಬೇಕು ಎಂದು ತಿಳಿಸಿದ್ದಾರೆ.

 
 
 
 
 
 
 
 
 

Leave a Reply