ಮದುವೆಯಾಗುತ್ತೇನೆಂದು ನಂಬಿಸಿ ಹಣ ಪಡೆದು ವಂಚಿನೆ  

ಕುಂದಾಪುರ: ಮಹಿಳೆಯೋರ್ವರಿಗೆ ಸರ್ಕಾರಿ ಕೆಲಸ ಕೊಡಿಸುತ್ತೇನೆ, ನಿನ್ನನ್ನೇ ಮದುವೆಯಾಗುತ್ತೇನೆಂದು ನಂಬಿಸಿ ಅವರಿಂದ ಹಣ ಪಡೆದು ವಂಚಿಸಿದ ಆರೋಪದಲ್ಲಿ ಕಾಂಗ್ರೆಸ್‌ ಬೆಂಬಲಿತ ಕುಂದಾಪುರದ ಮಾಜಿ ಪುರಸಭಾ ಸದಸ್ಯ ಸಂದೀಪ ಪೂಜಾರಿ ಕೋಡಿ (34) ಬಂಧಿ ಸಲಾಗಿದೆ.

ಸಂದೀಪ ಪೂಜಾರಿ ಎನ್ನುವ ವ್ಯಕ್ತಿ ಪರಿಶಿಷ್ಟ ಪಂಗಡಕ್ಕೆ ಸೇರಿರುವ ಮಹಿಳೆಯೋರ್ವರ ಪತಿ ಅಂಚೆ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ಮೃತಪಟ್ಟಿದ್ದು ಅವರ ಉದ್ಯೋಗವನ್ನು ಅವರ ಪತ್ನಿಗೆ ಕೊಡಿಸುವುದಾಗಿ ಹಾಗೂ ಮದುವೆಯಾಗುತ್ತೇನೆಂದು ಭರವಸೆ ಕೊಟ್ಟು ಆ ಮಹಿಳೆ ಯಿಂದ ಹಣವನ್ನು ಪಡೆದಿದ್ದನು. ನಂತರ ಸಂದೀಪ ಪೂಜಾರಿ ಆಕೆಗೆ ಬೈದು ಜಾತಿ ನಿಂದನೆ ಮಾಡಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಆ ಮಹಿಳೆ ತನ್ನ ಗೆಳತಿಯಲ್ಲಿ ಮೂಲಕ ಆಪಾದಿತನಲ್ಲಿ ವಿಚಾರಿಸಿದಾಗ ಅವರಿಗೂ ಸಹ ಅವಾಚ್ಯವಾಗಿ ಅವಹೇಳನ ಮಾಡಿದ್ದಾನೆ ಎನ್ನಲಾಗಿದೆ.

ಸೆ.1ರಂದು ಸಂದೀಪ ಪೂಜಾರಿ ಮೊಬೈಲ್ ನಂಬ್ರದಿಂದ ಆತನ ಪತ್ನಿಯೂ ಕೂಡ ವಂಚನೆಗೊಳಗಾದ ಮಹಿಳೆಗೆ ಕರೆ ಮಾಡಿ ನನ್ನಗಂಡನ ಬಗ್ಗೆ ಮಾತನಾಡದೆ ಸುಮ್ಮನಿರಬೇಕು ಎಂದು ಅವಾಚ್ಯವಾಗಿ ಬೈದು ಬೆದರಿಕೆ ಹಾಕಿದ್ದಳು. ಈ ಬಗ್ಗೆ ಆ ಮಹಿಳೆ ಸಂದೀಪ ಪೂಜಾರಿ ತನಗೆ ಕೆಲಸ ಕೊಡಿಸುತ್ತೇನೆಂದು ನಂಬಿಸಿ ಹಣವನ್ನೆಲ್ಲಾ ಮೋಸದಿಂದ ಪಡೆದುಕೊಂಡಿದ್ದು ವಿವಾಹವಾಗುತ್ತೇನೆ ಎಂದು ಸುಳ್ಳು ಹೇಳಿ ವಂಚಿಸಿರುವು ದಾಗಿ ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

 
 
 
 
 
 
 
 
 
 
 

Leave a Reply