ಸದ್ಯದಲ್ಲೇ ಅಸ್ತಿತ್ವಕ್ಕೆ ಬರಲಿದೆ ನೂತನ ‘ವಿಜಯನಗರ’ ಜಿಲ್ಲೆ!

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಬಳ್ಳಾರಿ ಜಿಲ್ಲೆಯ ವಿಭಾಗಕ್ಕೆ ಸೂಚನೆ ನೀಡಿದ್ದಾರೆ. ಬಳ್ಳಾರಿ ಜಿಲ್ಲೆ ತುಂಬಾ ವಿಸ್ತಾರವಾಗಿದ್ದು ಇದರಿಂದಾಗಿ ಜಿಲ್ಲೆಯ ಅನೇಕ ತಾಲೂಕಿನ ಜನರಿಗೆ ಜಿಲ್ಲಾಕೇಂದ್ರ ತಲುಪುವುದು ಕಷ್ಟ ಸಾಧ್ಯವಾಗುತ್ತಿದೆ.

ಆದಕಾರಣ ಬಳ್ಳಾರಿ ಜಿಲ್ಲೆಯನ್ನು ವಿಭಾಗಿಸಿ ವಿಜಯನಗರವನ್ನು ನೂತನ ಜಿಲ್ಲೆಯಾಗಿ ರಚಿಸುವುದರ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ಸಿಎಂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ. ಇನ್ನು ಕೆಲ ಸಮಯದಲ್ಲಿಯೇ ಹೊಸಪೇಟೆ ಯನ್ನು ಕೇಂದ್ರಿಕೃತಗೊಳಿಸಿಕೊಂಡು ನೂತನ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಬರಲಿದೆ.

ಇದರ ಬಗ್ಗೆ ರಾಜ್ಯ ಸರ್ಕಾರ ಮುಖ್ಯಕಾರ್ಯದರ್ಶಿಗೆ ಸಿಎಂ ಬಿಎಸ್ವೈ ಪತ್ರ ಬರೆದಿದ್ದುಪ್ರಸ್ತುತ ಬಳ್ಳಾರಿ ಜಿಲ್ಲೆಯು ತುಂಬಾ ವಿಸ್ತಾರವಾಗಿದೆ ಒಟ್ಟು 11 ತಾಲೂಕುಗಳಲ್ಲಿ ಉಪವಿಭಾಗಗಳನ್ನು ಒಳಗೊಂಡಿರುವ ಅತಿ ದೊಡ್ಡ ಜಿಲ್ಲೆಯಾಗಿದೆ. ಜಿಲ್ಲಾ ಕೇಂದ್ರದಿಂದ ಕೆಲವೊಂದು ಪ್ರದೇಶಗಳು ಬಹಳ ದೂರವಿರುವ ಕಾರಣ ಆ ಭಾಗದ ರೈತರಿಗೆ ಬಡವರಿಗೆ ಜನಸಾಮಾನ್ಯರ ಎಲ್ಲರಿಗೂ ತಮ್ಮ ಕೆಲಸ ಕಾರ್ಯಗಳಿಗೆ ಜಿಲ್ಲಾಕೇಂದ್ರ ತಲುಪುವುದು ಬಹಳ ಕಷ್ಟವಾಗಿತ್ತು.

ಹೀಗಾಗಿ ಸಾರ್ವಜನಿಕ ಹಾಗೂ ಆಡಳಿತ ಹಿತದೃಷ್ಠಿಯಿಂದ ಪ್ರಸ್ತುತ ಬಳ್ಳಾರಿ ಜಿಲ್ಲೆಯ 11 ತಾಲೂಕುಗಳಲ್ಲಿ ಮೂಲ ಬಳ್ಳಾರಿ ಜಿಲ್ಲೆಯಲ್ಲಿ ಐದು ತಾಲೂಕುಗಳನ್ನು ( ಬಳ್ಳಾರಿ, ಕುರುಗೋಡು, ಸಿರಗುಪ್ಪ, ಸಂಡೂರು ಮತ್ತು ಕೂಡ್ಲಿಗಿ) ಉಳಿಸಿಕೊಂಡು, ಉಳಿದ ಆರು ತಾಲೂಕುಗಳನ್ನು ( ಹೊಸಪೇಟೆ, ಕಂಪ್ಲಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹಡಗಲಿ ಮತ್ತು ಹರಪನಹಳ್ಳಿ) ಸೇರಿಸಿ ಹೊಸಪೇಟೆ ಪಟ್ಟಣವನ್ನು ಕೇಂದ್ರವನ್ನಾಗಿಸಿಕೊಂಡು, ನೂತನ ವಿಜಯನಗರ ಜಿಲ್ಲೆಯನ್ನು ರಚಿಸುವುದು ಅತ್ಯಗತ್ಯವಾಗಿದೆ. ಈ ಹಿನ್ನಲೆಯಲ್ಲಿ ಪ್ರಸಕ್ತ ವಿಷಯವನ್ನು ಮುಂದಿನ ಸಚಿವ ಸಂಪುಟ ಸಭೆಗೆ ಮಂಡಿಸುವಂತೆ ಪತ್ರದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚಿನೆ ನೀಡಿದ್ದಾರೆ.

 
 
 
 
 
 
 
 
 
 
 

Leave a Reply