ಉಡುಪಿ ಜಿಲ್ಲಾ ಅಸ್ಪತ್ರೆ ಮೇಲ್ದರ್ಜೆಗೇರಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ಅಭಿಂದನಾರ್ಹ:ಯಶ್‌ಪಾಲ್ ಸುವರ್ಣ.

ಉಡುಪಿ ಜಿಲ್ಲಾ ಅಸ್ಪತ್ರೆಯನ್ನು 250 ಬೆಡ್‌ಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿರುವ ರಾಜ್ಯ ಸರಕಾರಕ್ಕೆ ಜಿಲ್ಲೆಯ ಸಮಸ್ತ ಜನತೆಯ ಪರವಾಗಿ ಅಭಿ ನಂದನೆ ಸಲ್ಲಿಸುವುದಾಗಿ ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ  ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ ಸುದೀರ್ಘ 23 ವರ್ಷಗಳ ಬೇಡಿಕೆಗೆ ಸ್ಪಂದಿಸಿ 115 ಕೋಟಿ ವೆಚ್ಚದಲ್ಲಿ ಆಸ್ಪತ್ರೆ ಕಟ್ಟಡ, ಮೂಲ ಭೂತ ಸೌಕರ್ಯ ಹಾಗೂ ಸಿಬ್ಬಂದಿಗಳನ್ನೊಳಗೊ0ಡ ಈ ಬೃಹತ್ ಯೋಜನೆಗೆ ಅನುಮೋದನೆ ನೀಡುವ ಮೂಲಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರ ಕೊರೋನಾ ಸಂದರ್ಭದಲ್ಲಿಯೂ ಆರ್ಥಿಕ ಸಂಕಷ್ಟದ ನಡುವೆ ತಮ್ಮ ಬದ್ಧತೆಯನ್ನು ನಿರೂಪಿಸಿದೆ.
ಜಿಲ್ಲೆಯ ನಾಗರಿಕರ ಆರೋಗ್ಯ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿರುವ ಈ ಯೋಜನೆಗೆ ಅನುಮೋದನೆ ನೀಡಿದ ಮುಖ್ಯಮಂತ್ರಿಗಳಾದ ಬಿ ಎಸ್. ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವಡಾ ಸುಧಾಕರ್, ನಿಕಟಪೂರ್ವ ಆರೋಗ್ಯ ಸಚಿವ ಬಿ ರಾಮುಲು, ಸಚಿವ ಕೋಟ ಶ್ರೀನಿವಾಸ ಪೂಜಾರಿ 
ಈ ಮಹತ್ವದ ಯೋಜನೆ ಮಂಜೂರಾತಿಗೆ ವಿಶೇಷ ಮುತುವರ್ಜಿವಹಿಸಿದ ಸಂಸದರಾದ ಶೋಭಾ ಕರಂದ್ಲಾಜೆ , ಜಿಲ್ಲೆಯ ಶಾಸಕರಾದ ಶ್ರೀ ಕೆ. ರಘುಪತಿ ಭಟ್, ಹಾಲಾಡಿ ಶ್ರೀನಿವಾಸ ಶೆಟ್ಟಿ,  ಸುನೀಲ್ ಕುಮಾರ್, ಲಾಲಾಜಿ ಮೆಂಡನ್,ಸುಕುಮಾರ್ ಶೆಟ್ಟಿ ಹಾಗೂ ಜಿಲ್ಲಾಡಳಿತಕ್ಕೆ ಧನ್ಯವಾದಗಳನ್ನು ಸಲ್ಲಿಸುವುದಾಗಿ  ಪ್ರಕಟಣೆಯಲ್ಲಿ ತಿಳಿಸಿ ದ್ದಾರೆ.
 
 
 
 
 
 
 
 
 
 
 

Leave a Reply