ಸಿದ್ದರಾಮಯ್ಯ ಪುತ್ರನಿಗೂ ಸೋಂಕು

ಬೆಂಗಳೂರು : ಮಾಜಿ ಸಿ ಎಂ ಸಿದ್ದರಾಮಯ್ಯ ಅವರ ಮಗ, ಶಾಸಕ ಡಾ.ಯತೀಂದ್ರ ಅವರಿಗೂ ಕೊರೋನಾ ಪಾಸಿಟಿವ್ ಎಂಬು ದಾಗಿ ದೃಢಪಟ್ಟಿದೆ.  ಕುರಿತಂತು ಟ್ವಿಟ್ ಮಾಡಿರುವ ವರುಣಾ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಯತೀಂದ್ರ, ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದಿದ್ದಾರೆ.​ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟ ಹಿನ್ನಲೆಯಲ್ಲಿ ಶಾಸಕ ಡಾ.ಯತೀಂದ್ರ ಅವರು ಸದ್ಯದಲ್ಲಿಯೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದಾರೆ .​

 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply